Thursday, 12th December 2024

ಕೆಎಲ್ ರಾಹುಲ್’ಗೆ ಜರ್ಮನಿಯಲ್ಲಿ ಚಿಕಿತ್ಸೆ: ಬಿಸಿಸಿಐ

ಮುಂಬೈ: ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ. ಈ ಕುರಿತಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನಿರ್ಧರಿಸಿದೆ. 30 ವರ್ಷ ವಯಸ್ಸಿನ ರಾಹುಲ್ ತೊಡೆ ಸಂದು ಗಾಯದಿಂದ ಬಳಲುತ್ತಿದ್ದಾರೆ.

ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗದ ರಾಹುಲ್ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಳ್ಳಲಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಭಾರತ ತಂಡ ಜುಲೈ 1ರಿಂದ ಒಂದು ಟೆಸ್ಟ್ ಪಂದ್ಯವಾಡಲಿದ್ದು, ಬಳಿಕ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ನ್ನಾಡಲಿದೆ. ಈ ಸರಣಿಗೆ ತಂಡ ಪ್ರಕಟವಾಗಿದ್ದು, ರಾಹುಲ್ ರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಆದರೆ ರಾಹುಲ್ ಅಲಭ್ಯತೆಯ ಕಾರಣ ಬೇರೆ ಉಪನಾಯಕನ ಆಯ್ಕೆ ಮಾಡ ಬೇಕಾಗಿದೆ.

ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಪ್ರಮಖ ಆಟಗಾರರ ಮೊದಲ ತಂಡ ಈಗಾಗಲೇ ಇಂಗ್ಲೆಂಡ್ ತಲುಪಿದೆ. ಟೆಸ್ಟ್ ಪಂದ್ಯದಲ್ಲಿ ರಾಹುಲ್ ಬದಲಿಗೆ ಶುಬ್ಮನ್ ಗಿಲ್ ಅವರು ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.