Sunday, 15th December 2024

ಕೆಎಲ್ ರಾಹುಲ್ ಐಪಿಎಲ್, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನಿಂದಲೂ ಹೊರಕ್ಕೆ

ವದೆಹಲಿ: ಐಪಿಎಲ್ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಕಾಲಿನ ಗಾಯದಿಂದಾಗಿ ಋತುವಿನ ಉಳಿದ ಪಂದ್ಯಗಳಿಂದ ಹೊರಗುಳಿಯುವು ದಾಗಿ ಘೋಷಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಸಮಯದಲ್ಲಿ ಗಾಯಗೊಂಡ ರಾಹುಲ್, ಐಪಿಎಲ್ ಅಷ್ಟೇ ಅಲ್ಲ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಕೂಡ ಕೆ.ಎಲ್ ರಾಹುಲ್ ಆಡುವುದಿಲ್ಲ ಎಂದು ಸ್ಪಷ್ಟ ಪಡೆಸಿದ್ದಾರೆ.

ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಹುಲ್ ಗಾಯಗೊಂಡಿ ದ್ದರು. ಈಗ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಸುದೀರ್ಘ ಪೋಸ್ಟ್ ಮೂಲಕ ರಾಹುಲ್ ಈ ಬೆಳವಣಿಗೆಯನ್ನ ದೃಢಪಡಿಸಿದ್ದಾರೆ. ರಾಹುಲ್ ಅನುಪಸ್ಥಿತಿಯಲ್ಲಿ, ಕ್ರುನಾಲ್ ಪಾಂಡ್ಯ ಲಕ್ನೋ ಫ್ರಾಂಚೈಸಿಯ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ‘ವೈದ್ಯಕೀಯ ತಂಡದೊಂದಿಗೆ ಎಚ್ಚರಿಕೆಯಿಂದ ಪರಿಗಣಿಸಿದ ನಂತರ, ನಾನು ಶೀಘ್ರದಲ್ಲೇ ನನ್ನ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತೇನೆ ಎಂದು ತೀರ್ಮಾನಿಸಲಾಗಿದೆ. ಮುಂಬರುವ ವಾರಗಳಲ್ಲಿ ನನ್ನ ಚೇತರಿಕೆಯ ಮೇಲೆ ನನ್ನ ಗಮನ ಇರುತ್ತದೆ ಎಂದಿದ್ದಾರೆ.