ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟಿ-20 ಬ್ಯಾಟ್ಸ್‌ಮನ್‌ಗಳ ರ್‍ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಆರಂಭಿಕ ಕೆ.ಎಲ್. ರಾಹುಲ್ ಎರಡು ಸ್ಥಾನ ಕುಸಿದು 8ನೇ ಸ್ಥಾನದಲ್ಲಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ವಿರಾಟ್ ಅರ್ಧಶತಕ ಬಾರಿಸಿದ್ದರು.
ಪಾಕಿಸ್ತಾನ ವಿರುದ್ಧದ ಸೂಪರ್ 12ರ ಹಂತದ ಪಂದ್ಯದಲ್ಲಿ ಕೊಹ್ಲಿ (725 ರೇಟಿಂಗ್ ಪಾಯಿಂಟ್) 49 ಎಸೆತಗಳಲ್ಲಿ 57 ರನ್ ಬಾರಿಸಿದರೆ, ರಾಹುಲ್ (684 ರೇಟಿಂಗ್ ಪಾಯಿಂಟ್) 3 ರನ್ ಗಳಿಸಿದ್ದರು. ಭಾರತ 7 ವಿಕೆಟ್ ನಷ್ಟಕ್ಕೆ ಗಳಿಸಿದ್ದ 151 ರನ್ ಮೊತ್ತ ವನ್ನು ಪಾಕಿಸ್ತಾನ ತಂಡವು ಯಾವುದೇ ವಿಕೆಟ್ ನಷ್ಟವಿಲ್ಲದೆ 13 ಎಸೆತಗಳು ಬಾಕಿ ಇರು ವಂತೆಯೇ ತಲುಪಿತ್ತು.
ಪಾಕಿಸ್ತಾನದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಅವರು ಭಾರತದ ವಿರುದ್ಧ 79 ಮತ್ತು ನ್ಯೂಜಿಲೆಂಡ್ ವಿರುದ್ಧ 33 ರನ್ ಗಳಿಸುವ ಮೂಲಕ 3 ಸ್ಥಾನಗಳು ಮೇಲೇರಿ ವೃತ್ತಿ ಜೀವನದ ಅತ್ಯುತ್ತಮ ನಾಲ್ಕನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಕ್ರಮವಾಗಿ 40 ಮತ್ತು 51 ರನ್ ಗಳಿಸಿದ ದಕ್ಷಿಣ ಆಫ್ರಿಕಾದ ಮಾರ್ಕರಮ್ ಅವರು ತಮ್ಮ ವೃತ್ತಿಜೀವನದ ಅತ್ಯುತ್ತಮ ಹಂತಕ್ಕೆ ಏರಿದ್ದಾರೆ. ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಡೇವಿಡ್ ಮಲಾನ್ (831) ಮತ್ತು ಪಾಕಿಸ್ತಾನದ ನಾಯಕ ಬಾಬರ್ ಅಜಮ್ (820) ಮೊದಲ ಎರಡು ಸ್ಥಾನದಲ್ಲಿದ್ದಾರೆ.