Monday, 16th September 2024

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಐದನೇ ಸ್ಥಾನಕ್ಕೆ ಕುಸಿದ ಕೊಹ್ಲಿ

ದುಬೈ: ಇಂಗ್ಲೆಂಡ್‌ ವಿರುದ್ದ ಚೆನ್ನೈ ಟೆಸ್ಟ್ ಸೋಲಿನ ನಂತರ ವಿರಾಟ್ ಕೊಹ್ಲಿಗೆ ಮತ್ತೊಂದು ಆಘಾತ ಎದುರಾಗಿದೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ. ಚೆನ್ನೈ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ದ್ವಿಶತಕ ಬಾರಿಸಿದ ಜೋ ರೂಟ್ ಎರಡು ಸ್ಥಾನಗಳ ಏರಿಕೆ ಕಂಡು 3 ನೇ ಸ್ಥಾನ ಅಲಂಕರಿಸಿ, 883 ರೇಟಿಂಗ್ ಪಾಯಿಂಟ್‌ ಪಡೆದಿದ್ದಾರೆ. ಭಾರತದ ಉಪಖಂಡದಲ್ಲಿ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಜೋ ರೂಟ್ 684 ರನ್ ಗಳಿಸಿದ್ದರು. ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ ಒಂದು ಶತಕ ಮತ್ತು ದ್ವಿಶತಕ ಬಾರಿಸಿದ್ದರು.

2017 ರ ನಂತರ ಮೊದಲ ಬಾರಿಗೆ ವಿರಾಟ್ ಕೊಹ್ಲಿಯನ್ನು ಜೋ ರೂಟ್ ಹಿಂದಿಕ್ಕಿದ್ದಾರೆ. ನಂಬರ್ ಒನ್ ಸ್ಥಾನದಲ್ಲಿರುವ ಕೆನ್ ವಿಲಿಯಮ್ಸ್ ಗಿಂತ 36 ಪಾಯಿಂಟ್ ಹಿಂದಿದ್ದಾರೆ. ಸ್ಮಿತ್ ವಿಲಿಯಮ್ಸ್ ಗಿಂತ 8 ಪಾಯಿಂಟ್ ಹಿಂದಿದ್ದು, ಎರಡನೇ ಸ್ಥಾನದಲ್ಲಿ ದ್ದಾರೆ. ಚೆನ್ನೈ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ 91 ರನ್ ಗಳಿಸಿದ ರಿಷಭ್ ಪಂತ್ 13 ನೇ ಸ್ಥಾನದಲ್ಲಿದ್ದಾರೆ.

Leave a Reply

Your email address will not be published. Required fields are marked *