Saturday, 14th December 2024

ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ: ಕೊಹ್ಲಿ-ಗಂಭೀರ್‌ಗೆ ಶೇ.100 ರಷ್ಟು ದಂಡ

ಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ 2023 ರ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ.

‘ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್… ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಯನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಇವರಿಬ್ಬರನ್ನು ಲೆವೆಲ್ 2 ಅಪರಾಧಕ್ಕೆ ದಾಖಲಿಸಲಾಗಿದೆ.