Thursday, 12th December 2024

ಟಿ20 ವಿಶ್ವಕಪ್: ಕೊಹ್ಲಿಗೆ ಚಾನ್ಸ್ ಸಿಗುವುದು ಡೌಟು…!

ಮುಂಬೈ:  ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದ್ದು, ವೆಸ್ಟ್ ಇಂಡೀಸ್-ಯುಎಸ್​ಎನಲ್ಲಿ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ.
ಈ ಟೂರ್ನಿಗಾಗಿ ಆಯ್ಕೆ ಮಾಡಲಾಗುವ ತಂಡದಲ್ಲಿ ವಿರಾಟ್ ಕೊಹ್ಲಿಗೆ ಚಾನ್ಸ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಜೂನ್ 1 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ತಂಡಗಳನ್ನು ಪ್ರಕಟಿಸಲು ಮೇ 1 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 20 ದೇಶಗಳು ತಮ್ಮ ತಂಡಗಳನ್ನು ಘೋಷಿಸಲಿದೆ.

ಟಿ20 ವಿಶ್ವಕಪ್ ತಂಡದ ಆಯ್ಕೆಗೂ ಮುನ್ನ ಟೀಮ್​ನಿಂದ ಹೊರಗುಳಿಯಲು ವಿರಾಟ್ ಕೊಹ್ಲಿಯನ್ನು ಮನವೊಲಿಸುವಂತೆ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್​ಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಈ ಬಾರಿಯ ಟಿ20 ವಿಶ್ವಕಪ್​ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್​ಗಳಿದ್ದು, ಇದು ಕೊಹ್ಲಿಯ ಬ್ಯಾಟಿಂಗ್​ಗೆ ಸರಿಹೊಂದುವುದಿಲ್ಲ.

ವಿರಾಟ್ ಕೊಹ್ಲಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ಅವರು ಈ ಬಾರಿಯ ಐಪಿಎಲ್​ನಲ್ಲಿ ಅಸಾಧಾರಣ ಪ್ರದರ್ಶನ ನೀಡಬೇಕಾಗುತ್ತದೆ.

ಏಕೆಂದರೆ ವಿರಾಟ್ ಕೊಹ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಆಡಿರುವುದು ಕೇವಲ 2 ಟಿ20 ಪಂದ್ಯಗಳನ್ನು ಮಾತ್ರ. ಏಕದಿನ ವಿಶ್ವಕಪ್​ಗೆ ಗಮನ ಕೇಂದ್ರೀಕರಿಸಲು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ತಂಡದಿಂದ ಹೊರಗುಳಿದಿದ್ದರು.