ಅನುಮಾನಗಳ ಮಧ್ಯೆಯೂ ಕ್ರೀಡಾಂಗಣ ಸಿದ್ಧಪಡಿಸಿದ ಪಾಕ್
pakistan cricket stadium: ಪಾಕಿಸ್ತಾನದ ಕ್ರೀಡಾಂಗಣಗಳ ಕಾಮಗಾರಿಗಳು ನಿಧಾನವಾಗಿ ನಡೆಯುತ್ತಿದ್ದು, ಅದು ವಿಳಂಬವಾಗಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಪಿಸಿಬಿ, ಪಂದ್ಯಾವಳಿ ಆರಂಭವಾಗಲು ಒಂದು ವಾರ ಮೊದಲು ಫೆ.12ರಂದು ಸ್ಟೇಡಿಯಮ್ಗಳನ್ನು ಐಸಿಸಿಗೆ ಹಸ್ತಾಂತರಿಸುವ ಅಗತ್ಯವಿದೆ.
![Gaddafi stadium (2)](https://cdn-vishwavani-prod.hindverse.com/media/images/Gaddafi_stadium_2.max-1280x720.jpg)
![Profile](https://vishwavani.news/static/img/user.png)
ಲಾಹೋರ್: ಹಲವು ಅನುಮಾನಗಳ ಮಧ್ಯೆಯೂ ಗದ್ದಾಫಿ ಕ್ರೀಡಾಂಗಣದ(pakistan cricket stadium) ನವೀಕರಣ ಮತ್ತು ಮೇಲ್ದರ್ಜೆ ಕಾಮಗಾರಿ 117 ದಿನಗಳ ದಾಖಲೆ ಸಮಯದಲ್ಲಿ ಪೂರ್ತಿಗೊಳಿಸುವ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸೈ ಎನಿಸಿಕೊಂಡಿದೆ. ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಕ್ರೀಡಾಂಗಣ ಐಸಿಸಿ ಚಾಂಪಿಯನ್ಸ್(Champions Trophy) ಟ್ರೋಫಿ ಸೇರಿದಂತೆ ಅಂತಾರಾಷ್ಟ್ರೀಯ ಪಂದ್ಯಗಳ ಆತಿಥ್ಯ ವಹಿಸಲು ಸಿದ್ಧವಾಗಿದೆ ಎಂದು ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತಿಳಿಸಿದೆ.
'ಆತಂಕಗಳು ಹಾಗೂ ಟೀಕೆಗಳ ಹೊರತಾಗಿಯೂ ಕ್ರೀಡಾಂಗಣವನ್ನು ಸಮಯಕ್ಕೆ ಸರಿಯಾಗಿ ಸಿದ್ಧಪಡಿಸಲು ಹಗಲಿರುಳು ಶ್ರಮಿಸಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ. ಈ ಕನಸನ್ನು ಸಾಧ್ಯವಾಗಿಸಿದ ಸುಮಾರು 1,000 ಕಾರ್ಮಿಕರಿಗೆ ನಾನು ವಿಶೇಷವಾಗಿ ಋಣಿಯಾಗಿದ್ದೇನೆ' ಎಂದು ಪಿಸಿಬಿ ಮುಖ್ಯಸ್ಥ ಮುಹ್ಸಿನ್ ನಖ್ವಿ ಹೇಳಿದ್ದಾರೆ.
ಪಾಕಿಸ್ತಾನದ ಕ್ರೀಡಾಂಗಣಗಳ ಕಾಮಗಾರಿಗಳು ನಿಧಾನವಾಗಿ ನಡೆಯುತ್ತಿದ್ದು, ಅದು ವಿಳಂಬವಾಗಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಪಿಸಿಬಿ, ಪಂದ್ಯಾವಳಿ ಆರಂಭವಾಗಲು ಒಂದು ವಾರ ಮೊದಲು ಫೆ.12ರಂದು ಸ್ಟೇಡಿಯಮ್ಗಳನ್ನು ಐಸಿಸಿಗೆ ಹಸ್ತಾಂತರಿಸುವ ಅಗತ್ಯವಿದೆ.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಕಮಿನ್ಸ್, ಹ್ಯಾಜಲ್‌ವುಡ್
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಲಾಹೋರ್ ಮತ್ತು ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ದ.ಆಫ್ರಿಕಾ ತಂಡಗಳ ವಿರುದ್ಧ ತ್ರಿಕೋನ ಸರಣಿಯನ್ನು ಪಾಕಿಸ್ತಾನ ಆಡಲಿಳಿಯಲಿದೆ. ಫೈನಲ್ ಸೇರಿದಂತೆ ನಾಲ್ಕು ಪಂದ್ಯಗಳ ಈ ಸರಣಿ ಫೆ.8ರಿಂದ 14ರ ತನಕ ನಡೆಯಲಿದೆ.
ಟ್ರೋಫಿ ಯಾವಾಗ?
19 ದಿನಗಳ ಕಾಲ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಫೆಬ್ರವರಿ 19ರಂದು ಹಾಲಿ ಚಾಂಪಿಯನ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.
ಭಾರತ ಒಳಗೊಂಡ 3 ಲೀಗ್ ಪಂದ್ಯಗಳು ಮತ್ತು ಒಂದು ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಿಗದಿಯಾಗಿದೆ. ಟೂರ್ನಿಯ ಉಳಿದ 9 ಲೀಗ್ ಮತ್ತು ಇನ್ನೊಂದು ಸೆಮಿಫೈನಲ್ ಪಂದ್ಯ ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ನಲ್ಲಿ ನಿಗದಿಯಾಗಿವೆ. 2ನೇ ಸೆಮಿಫೈನಲ್ ಮಾರ್ಚ್ 2ರಂದು ಲಾಹೋರ್ನಲ್ಲಿ ನಿಗದಿಯಾಗಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್ ರಾಬಿನ್ ಲೀಗ್ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ಗೇರಲಿವೆ. ಭಾರತದ ಪಂದ್ಯಗಳು ತಟಸ್ಥ ತಾಣವಾದ ದುಬೈನಲ್ಲಿ ನಡೆಯಲಿದೆ.