ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಂತರರಾಷ್ಟ್ರೀಯ ಭಾರ ಎತ್ತುವ ಸ್ಪರ್ಧೆಯಲ್ಲಿ ಲಕ್ಷ್ಮೀಗೆ ಚಾಂಪಿಯನ್ ಪಟ್ಟ

ನಗರದ 21ನೇ ವಾರ್ಡಿನ ಅರವಿಂದನಗರ ನಿವಾಸಿ ಲಕ್ಷ್ಮೀ ಅವರ ಸಾಧನೆಯನ್ನು ಮೆಚ್ಚಿದ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಅವರು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ತಾಲೂ ಕಿನ ಹೆಣ್ಣುಮಗಳು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಅಂತರರಾಷ್ಟ್ರೀಯ ಭಾರ ಎತ್ತುವ ಸ್ಪರ್ಧೆಯಲ್ಲಿ ಲಕ್ಷ್ಮೀಗೆ ಚಾಂಪಿಯನ್ ಪಟ್ಟ

-

Profile
Ashok Nayak Sep 8, 2026 10:46 PM

ಗೌರಿಬಿದನೂರು: ಥೈಲ್ಯಾಂಡ್‌ನಲ್ಲಿ ನಡೆದ ಯುನೈಟೆಡ್ ವರ್ಲ್ಡ್ ಫಿಟ್ನೆಸ್ ಫೆಡರೇಶನ್‌ನ 105 ಕೆ.ಜಿ. ವಿಭಾಗದ ಭಾರ ಎತ್ತುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಗೌರಿಬಿದನೂರಿನ ಕ್ರೀಡಾಪಟು ಲಕ್ಷ್ಮೀ ಪ್ರಥಮ ಸ್ಥಾನ ಪಡೆದು ದೇಶ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ನಗರದ 21ನೇ ವಾರ್ಡಿನ ಅರವಿಂದನಗರ ನಿವಾಸಿ ಲಕ್ಷ್ಮೀ ಅವರ ಸಾಧನೆಯನ್ನು ಮೆಚ್ಚಿದ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K.H.Puttaswamigowda) ಅವರು ಸನ್ಮಾನಿಸಿ ಗೌರವಿಸಿದರು.

ಇದನ್ನೂ ಓದಿ: Gauribidanur News: ಸ್ವಯಂ ತೆರವುಗೊಳಿಸದಿದ್ದರೆ ಮುನ್ಸೂಚನೆ ಇಲ್ಲದೆ ನಗರಸಭೆಯಿಂದ ಕಾರ್ಯಾಚರಣೆ: ಪೌರಾಯುಕ್ತ ರಮೇಶ್

ಬಳಿಕ ಮಾತನಾಡಿದ ಅವರು, ತಾಲೂಕಿನ ಹೆಣ್ಣುಮಗಳು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಮುಂದೆಯೂ ಇಂತಹ ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಇನ್ನಷ್ಟು ಸಾಧನೆ ಮಾಡುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ರೂಪಾ ಅನಂತರಾಜು, ಮಾಜಿ ಸದಸ್ಯ ಅನಂತ ರಾಜು, ಲಕ್ಷ್ಮೀನಾರಾಯಣ, ರಾಜಕುಮಾರ್, ಕಲೀಮ್, ಅಜಿತ್, ಶ್ರೀನಿವಾಸ್, ಅಮರನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.