Sunday, 15th December 2024

ಬ್ಯಾಡ್ಮಿಂಟನ್: ಚಿನ್ನ ಗೆದ್ದ ಲಕ್ಷ್ಯ ಸೇನ್

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ.

ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ 19-21, 21-9, 21-16ರಲ್ಲಿ ಮಲೇಷ್ಯಾದ ಎನ್ಜಿ ತ್ಸೆ ಯಾಂಗ್ ಅವರನ್ನು ಸೋಲಿಸಿ ಚಿನ್ನ ಗೆದ್ದಿದ್ದಾರೆ. ಈ ಗೆಲುವಿನೊಂದಿಗೆ ಭಾರತ ತನ್ನ 20ನೇ ಚಿನ್ನದ ಪದಕ ದಾಖಲಿಸಿದೆ.

 

ಈ ಮೊದಲು ಭಾರತದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ.ಸಿಂಧು ಅವರು ಸ್ವರ್ಣ ಪದಕ ಗೆದ್ದಿದ್ದರು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಬರೆದಿದ್ದರು. ಈ ಬೆನ್ನಲ್ಲೇ ಇದೀಗ ಕಾಮನ್ ವೆಲ್ತ್ ಗೇಮ್ಸ್ ನ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತದ ಲಕ್ಷ್ಯ ಸೇನ್ ಮಲೇಷ್ಯಾದ ಎದುರಾಳಿ ಕ್ರೀಡಾಪಟುವನ್ನು ಸೋಲಿಸಿ ಬಂಗಾರವನ್ನು ಗೆದ್ದಿದ್ದಾರೆ.