Jasprit Bumrah: ಬುಮ್ರಾ ಇಲ್ಲದೆಯೂ ಭಾರತ ಆಡಲು ಕಲಿಯಬೇಕು: ಹರ್ಭಜನ್
ಈ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡ 2.24 ಮಿಲಿಯನ್ ಯುಎಸ್ ಡಾಲರ್ (ಸುಮಾರು 19.4 ಕೋಟಿ ರು.) ನಗದು ಬಹುಮಾನ ಪಡೆಯಲಿದೆ. ಒಟ್ಟಾರೆ 6.9 ಮಿಲಿಯನ್ ಯುಎಸ್ ಡಾಲರ್ ಮೊತ್ತವನ್ನು ಐಸಿಸಿ ಮೀಸಲಿಟ್ಟಿದೆ. ಇದು ಕಳೆದ ಬಾರಿಗಿಂತ ಶೇ.53ರಷ್ಟು ಹೆಚ್ಚು.


ಮುಂಬಯಿ: 2025ರ ಚಾಂಪಿಯನ್ಸ್ ಟ್ರೋಫಿ ಫೆ.19ರಿಂದ ಆರಂಭವಾಗಲಿದೆ. ಪ್ರತಿ ಬಾರಿಯಂತೆ ಈ ಸಲವೂ 8 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಭಾರತ ತಂಡ ಪ್ರಧಾನ ವೇಗಿ ಜಸ್‌ಪ್ರೀತ್ ಬುಮ್ರಾ ಸೇವೆ ಕಳೆದುಕೊಂಡಿದೆ. ಬುಮ್ರಾ ಇಲ್ಲದೆಯೂ ಐಸಿಸಿ ಟೂರ್ನಿಗಳಲ್ಲಿ ಭಾರತ ಆಡಲು ಕಲಿಯಬೇಕು ಎಂದು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್(Harbhajan Singh) ಹೇಳಿದ್ದಾರೆ.
ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಹರ್ಭಜನ್, ‘ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಫೇವರಿಟ್ ತಂಡ. ಅರ್ಶ್‌ದೀಪ್, ಶಮಿ, ಜಡೇಜಾ ಸೇರಿ ಅನುಭವಿ ಆಟಗಾರರು ತಂಡದಲ್ಲಿದ್ದಾರೆ. ವಿರಾಟ್, ರೋಹಿತ್, ಶ್ರೇಯಸ್, ಶುಭ್‌ಮನ್ ಕೂಡಾ ಉತ್ತಮ ಲಯದಲ್ಲಿದ್ದಾರೆ. ಆದರೆ ಬುಮ್ರಾ ಅನುಪಸ್ಥಿತಿ ತಂಡವನ್ನು ಕಾಡಬಹುದು. ಆದರೂ ನಿಮಗೆ ಟ್ರೋಫಿ ಗೆಲ್ಲಲೇಬೇಕಿದ್ದರೆ, ಬುಮ್ರಾ ಇಲ್ಲದೆ ಆಡುವುದನ್ನು ಕಲಿಯಬೇಕು’ ಎಂದು ಸಲಹೆ ನೀಡಿದ್ದಾರೆ.
ಭಾರೀ ಬಹುಮಾನ ಮೊತ್ತ
ಈ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡ 2.24 ಮಿಲಿಯನ್ ಯುಎಸ್ ಡಾಲರ್ (ಸುಮಾರು 19.4 ಕೋಟಿ ರು.) ನಗದು ಬಹುಮಾನ ಪಡೆಯಲಿದೆ. ಒಟ್ಟಾರೆ 6.9 ಮಿಲಿಯನ್ ಯುಎಸ್ ಡಾಲರ್ ಮೊತ್ತವನ್ನು ಐಸಿಸಿ ಮೀಸಲಿಟ್ಟಿದೆ. ಇದು ಕಳೆದ ಬಾರಿಗಿಂತ ಶೇ.53ರಷ್ಟು ಹೆಚ್ಚು.
ರನ್ನರ್-ಅಪ್ ತಂಡಕ್ಕೆ 1.12 ಮಿಲಿಯನ್ ಯುಎಸ್ ಡಾಲರ್ (ಸುಮಾರು 9.72 ಕೋಟಿ ರು.) ನಗದು ಬಹುಮಾನ ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ ತಲಾ 4.86 ಕೋಟಿ ರು. ಲಭಿಸಲಿದೆ. 5 ಮತ್ತು 6ನೇ ಸ್ಥಾನ ಪಡೆದ ತಂಡಗಳು ತಲಾ ₹3 ಕೋಟಿ, 7 ಮತ್ತು 8ನೇ ಸ್ಥಾನ ಪಡೆಯುವ ತಂಡಗಳು ತಲಾ 1.2 ಕೋಟಿ ಬಹುಮಾನ ಪಡೆಯಲಿವೆ. ಅಲ್ಲದೆ, ಟೂರ್ನಿಯಲ್ಲಿ ಪಾಲ್ಗೊಂಡಿದ್ದಕ್ಕೆ ಎಲ್ಲಾ ತಂಡಗಳಿಗೆ ಹೆಚ್ಚು ವರಿಯಾಗಿ ತಲಾ 1.08 ಕೋಟಿ ರು. ನಗದು ಬಹುಮಾನ ಸಿಗಲಿದೆ. ಗುಂಪು ಹಂತದಲ್ಲಿ ಗೆಲ್ಲುವ ತಂಡಗಳಿಗೆ 30 ಲಕ್ಷ ದೊರೆಯಲಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್ ರಾಬಿನ್ ಲೀಗ್ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ಗೇರಲಿವೆ.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಬೆನ್ ಸೀರ್ಸ್ ಔಟ್, ನ್ಯೂಜಿಲೆಂಡ್‌ಗೆ ಆಘಾತ!
ವೇಳಾಪಟ್ಟಿ
ಫೆ.19 ಪಾಕಿಸ್ತಾನ-ನ್ಯೂಜಿಲ್ಯಾಂಡ್, ಸ್ಥಳ: ಕರಾಚಿ
ಫೆ. 20 ಬಾಂಗ್ಲಾದೇಶ-ಭಾರತ, ಸ್ಥಳ: ದುಬೈ
ಫೆ. 21 ಅಫ್ಘಾನಿಸ್ತಾನ-ದ. ಆಫ್ರಿಕಾ, ಸ್ಥಳ: ಕರಾಚಿ
ಫೆ. 22 ಆಸ್ಟ್ರೆಲಿಯಾ-ಇಂಗ್ಲೆಂಡ್, ಸ್ಥಳ: ಲಾಹೋರ್
ಫೆ. 23 ಭಾರತ-ಪಾಕಿಸ್ತಾನ,ಸ್ಥಳ: ದುಬೈ
ಫೆ. 24 ಬಾಂಗ್ಲಾದೇಶ-ನ್ಯೂಜಿಲ್ಯಾಂಡ್, ಸ್ಥಳ: ರಾವಲ್ಪಿಂಡಿ
ಫೆ. 25 ಆಸ್ಟ್ರೆಲಿಯಾ-ದ. ಆಫ್ರಿಕಾ,ಸ್ಥಳ: ರಾವಲ್ಪಿಂಡಿ
ಫೆ. 26 ಅಫ್ಘಾನಿಸ್ತಾನ-ಇಂಗ್ಲೆಂಡ್,ಸ್ಥಳ: ಲಾಹೋರ್
ಫೆ. 27 ಪಾಕಿಸ್ತಾನ-ಬಾಂಗ್ಲಾದೇಶ,ಸ್ಥಳ: ರಾವಲ್ಪಿಂಡಿ
ಫೆ. 28 ಅಫ್ಘಾನಿಸ್ತಾನ-ಆಸ್ಟ್ರೆಲಿಯಾ,ಸ್ಥಳ: ಲಾಹೋರ್
ಮಾ. 1 ದಕ್ಷಿಣ ಆಫ್ರಿಕಾ-ಇಂಗ್ಲೆಂಡ್,ಸ್ಥಳ: ಕರಾಚಿ
ಮಾ. 2 ಭಾರತ-ನ್ಯೂಜಿಲ್ಯಾಂಡ್, ಸ್ಥಳ: ದುಬೈ
ಮಾ. 4 ಸೆಮಿಫೈನಲ್-1, ಸ್ಥಳ: ದುಬೈ
ಮಾ. 5 ಸೆಮಿಫೈನಲ್-2, ಸ್ಥಳ: ಲಾಹೋರ್
ಮಾ. 9 ಫೈನಲ್ -ಸ್ಥಳ: ದುಬೈ/ಲಾಹೋರ್