Rahul Dravid: ಬ್ಯಾಂಡೇಜ್ ಸುತ್ತಿಕೊಂಡು, ಊರುಗೋಲಿನ ಸಹಾಯದಲ್ಲಿ ಕೋಚಿಂಗ್ ನಡೆಸಿದ ದ್ರಾವಿಡ್
IPL 2025: ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮಾರ್ಚ್ 23 ರಂದು ನಡೆಯುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಚೊಚ್ಚಲ ಆವೃತ್ತಿಯಲ್ಲಿ ರಾಜಸ್ಥಾನ್ ಚಾಂಪಿಯನ್ ಆದ ಬಳಿಕ ಇದುವರೆಗೆ ಕಪ್ ಗೆದ್ದಿಲ್ಲ. ಈ ಬಾರಿ ದ್ರಾವಿಡ್ ಮಾರ್ಗದರ್ಶನದಲ್ಲಿ ತಂಡ ಕಪ್ ಗೆಲ್ಲಬಹುದೇ ಎಂದು ಕಾದು ನೋಡಬೇಕಿದೆ.


ಜೈಪುರ: ಕೆಎಸ್‌ಸಿಎ 3ನೇ ಡಿವಿಷನ್ ಕ್ರಿಕೆಟ್ ಟೂರ್ನಿಯಲ್ಲಿ ವಿಜಯ್ ಕ್ರಿಕೆಟ್ ಕ್ಲಬ್ ಪರ ಆಡುವ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಕೋಚ್ ರಾಹುಲ್ ದ್ರಾವಿಡ್(Rahul Dravid) ತಮ್ಮ ಗಾಯವನ್ನು ಲೆಕ್ಕಿಸದೆ ಐಪಿಎಲ್(IPL 2025) ಕರ್ತವ್ಯಕ್ಕೆ ಹಾಜರ್ ಆಗಿದ್ದಾರೆ. ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ಊರುಗೋಲಿನ ಸಹಾಯದಲ್ಲಿ ನಡೆಯುತ್ತಾ ಮೈದಾನದಲ್ಲಿ ಆಟಗಾರರಿಗೆ ಬ್ಯಾಟಿಂಗ್ ಮಾರ್ಗದರ್ಶನ ನೀಡುತ್ತಿರುವ ವಿಡಿಯೊವನ್ನು ರಾಜಸ್ಥಾನ್ ರಾಯಲ್ಸ್(Rajasthan Royals) ತನ್ನ ಅಧಿಕೃತ ಟ್ವಿಟರ್ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಈ ವಿಡಿಯೊ ಕಂಡ ಅನೇಕ ಕ್ರಿಕೆಟ್ ಅಭಿಮಾನಿಗಳು ಬದ್ಧತೆ ಎಂದರೆ ನಿಮ್ಮನ್ನು ನೋಡಿ ಕಲಿಯಬೇಕು. ಹ್ಯಾಂಡ್ಸಪ್! ರಾಹುಲ್ ಸರ್ ಎಂದು ಕಮೆಂಟ್ ಮಾಡಿದ್ದಾರೆ.
ಕೆಲವು ವಾರಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಕಿರಿಯ ಮಗ ಅನ್ವಯ್ ದ್ರಾವಿಡ್ ಜತೆ ಆಡಿದ್ದ ದ್ರಾವಿಡ್ ಮಗನ ಜತೆಗೂಡಿ ಜೋಡಿ ಐದನೇ ವಿಕೆಟ್‌ಗೆ 17 ರನ್‌ಗಳ ಸಂಕ್ಷಿಪ್ತ ಜೊತೆಯಾಟವಾಡಿತ್ತು. ಆದರೆ ಅದೇ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡರು. ಅವರ ಕಾಲಿಗೆ ಗಂಭೀರ ಪೆಟ್ಟಾಗಿತ್ತು. ಕಾಲಿಗೆ ದೊಡ್ಡ ಮಟ್ಟದಲ್ಲೇ ಬ್ಯಾಂಡೇಜ್ ಕಟ್ಟಲಾಗಿತ್ತು. ಇದು ಅವರು ಮತ್ತೆ ಮೈದಾನಕ್ಕೆ ಇಳಿಯುವುದಿಲ್ಲ ಎಂದು ಹೇಳಲಾಗಿತ್ತು. ಇದೇ ವಿಚಾರ ಅವರು ಕೋಚಿಂಗ್ ಮಾಡುತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ಆತಂಕಕ್ಕೂ ಕಾರಣವಾಗಿತ್ತು. ಆದರೆ ಅವರು ಗಾಯವನ್ನು ಮರೆತು ಕೋಚಿಂಗ್ ಕರ್ತವ್ಯಕ್ಕೆ ಹಾಜರಾ ಆಗುವ ಮೂಲ ತಂಡದ ಮತ್ತು ಆಟಗಾರರ ಆತಂಕವನ್ನು ದೂರ ಮಾಡಿದ್ದಾರೆ.
ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್ ಸೇರಿ ಹಲವು ಆಟಗಾರರು ದ್ರಾವಿಡ್ ಅವರಿಂದ ಬ್ಯಾಟಿಂಗ್ ಸಲಹೆ ಪಡೆದು ಅಭ್ಯಾಸ ನಡೆಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದಾಗಿದೆ. 2014ರಲ್ಲಿ ರಾಜಸ್ಥಾನ ರಾಯಲ್ಸ್ ಕೋಚ್ ಆಗಿದ್ದ ದ್ರಾವಿಡ್, ಬಳಿಕ ಭಾರತದ 19 ವರ್ಷದೊಳಗಿನವರ ತಂಡ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕೋಚ್ ಮತ್ತು ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕೆಲಸ ಮಾಡಿದ್ದರು. ಇದೀಗ ಅವರು ಮಾಜಿ ತಂಡಕ್ಕೆ 10 ವರ್ಷಗಳ ಬಳಿಕ ಮರಳಿ ಕೋಚಿಂಗ್ ನೀಡುತ್ತಿದ್ದಾರೆ.
ಇದನ್ನೂ ಓದಿ IPL 2025: ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆಯಲು ವಿರಾಟ್ ಕೊಹ್ಲಿಗೆ ಒಂದು ಶತಕ ಅಗತ್ಯ!
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮಾರ್ಚ್ 23 ರಂದು ನಡೆಯುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಚೊಚ್ಚಲ ಆವೃತ್ತಿಯಲ್ಲಿ ರಾಜಸ್ಥಾನ್ ಚಾಂಪಿಯನ್ ಆದ ಬಳಿಕ ಇದುವರೆಗೆ ಕಪ್ ಗೆದ್ದಿಲ್ಲ. ಆ ಬಳಿಕ ಒಮ್ಮೆ ಫೈನಲ್ ಮತ್ತು ಹಲವು ಬಾರಿ ಸೆಮಿ ಫೈನಲ್ ಪ್ರವೇಶಿಸಿದ್ದರೂ ಟ್ರೋಫಿ ಮಾತ್ರ ಒಲಿದಿಲ್ಲ. ಈ ಬಾರಿ ದ್ರಾವಿಡ್ ಮಾರ್ಗದರ್ಶನದಲ್ಲಿ ತಂಡ ಕಪ್ ಗೆಲ್ಲಬಹುದೇ ಎಂದು ಕಾದು ನೋಡಬೇಕಿದೆ.