ಲಕ್ನೋ: ಲಕ್ನೋದಲ್ಲಿ ಏಪ್ರಿಲ್ 1ರಂದು ನಡೆಯಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ ನ 16ನೇ ಸೀಸನ್‌ನ ಮೂರನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಲಿವೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳಿಗೆ ಪಂದ್ಯಾವಳಿಯ ಮೊದಲ ಮೊದಲ ಪಂದ್ಯವಾಗಿದ್ದು, ಗೆಲುವಿನ ಮೂಲಕ ತಮ್ಮ ಅಭಿಯಾನ ಪ್ರಾರಂಭಿಸಲು ಎದುರು ನೋಡುತ್ತಿವೆ.
ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅನುಪಸ್ಥಿತಿಯಲ್ಲಿ ಆಡಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಸ್ತಫಿಜುರ್ ರೆಹಮಾನ್, ಅನ್ರಿಚ್ ನಾರ್ಟ್ಜೆ ಮತ್ತು ಲುಂಗಿ ಎನ್‌ಗಿಡಿ ಅವರನ್ನು ಮಿಸ್ ಮಾಡಿಕೊಳ್ಳಲಿದೆ.
ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೆಚ್ಚು ಸಮತೋಲನದಿಂದ ಕೂಡಿದ ತಂಡ ವಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಲು ಎದುರು ನೋಡುತ್ತಿದೆ. ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪಂದ್ಯ ಗೆದ್ದುಕೊಡುವ ಆಟಗಾರರಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅವರದೇ ನೆಲದಲ್ಲಿ ಮಣಿಸಿ ಶುಭಾರಂಭ ಮಾಡಲು ಹವಣಿಸುತ್ತಿದೆ.
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂ ಪಿಚ್‌ನಲ್ಲಿ ಒಂಬತ್ತು ಟಿ20 ಪಂದ್ಯಗಳನ್ನು ಆಡಲಾಗಿದ್ದು, ಐದು ಪಂದ್ಯಗಳನ್ನು ತಂಡವು ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕವಾಗಿದ್ದು, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಬೃಹತ್ ಗುರಿಯನ್ನು ನೀಡುವತ್ತ ಒಲವು ತೋರಿಸಲಿವೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಆಯುಷ್ ಬದೋನಿ, ಜಯದೇವ್ ಉನಾದ್ಕಟ್, ಮಾರ್ಕ್ ವುಡ್, ಅವೇಶ್ ಖಾನ್, ರವಿ ಬಿಷ್ಣೋಯ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಲೀ ರುಸ್ಸೌವ್, ಅಭಿಷೇಕ್ ಪೋರೆಲ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಕಮಲೇಶ್ ನಾಗರಕೋಟಿ, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್.
Read E-Paper click here