Maharaja Trophy: ಮಹಾರಾಜ ಟ್ರೋಫಿ ಬೆಂಗಳೂರಿನಿಂದ ಮೈಸೂರಿಗೆ ಶಿಫ್ಟ್
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಇತ್ತೀಚೆಗೆ ಇದರ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ನ್ಯಾ.ಕುನ್ಹಾ ಆಯೋಗ, ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಹೇಳಿತ್ತು. ಇದರಿಂದ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಮತ್ತೊಮ್ಮೆ ಯಾವುದೇ ದುರ್ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಲೀಗ್ ಆಯೋಜನೆಗೆ ನಿರಾಕರಿಸಿದೆ.

ಬೆಂಗಳೂರು: ನಿರೀಕ್ಷೆಯಂತೆ ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಲೀಗ್(Maharaja Trophy) ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಗೊಂಡಿದೆ. ಟೂರ್ನಿಯ ಪಂದ್ಯಗಳು ಆ.11ರಿಂದ 27ರ ವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ಕೆಎಸ್‌ಸಿಎ ಹಾಗೂ ಕೆಲ ಫ್ರಾಂಚೈಸಿಗಳು ಮಾಹಿತಿ ನೀಡಿವೆ. ಟೂರ್ನಿಯನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(m chinnaswamy stadium) ಪ್ರೇಕ್ಷಕರಿಲ್ಲದೆ ಆಯೋಜಿಸಲು ಕೆಎಸ್‌ಸಿಎ ನಿರ್ಧರಿಸಿತ್ತು. ಆದರೆ ಪೊಲೀಸ್ ಇಲಾಖೆ ಟೂರ್ನಿಗೆ ಅನುಮತಿ ನೀಡದ ಕಾರಣ ಟೂರ್ನಿಯನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ.
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಇತ್ತೀಚೆಗೆ ಇದರ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ನ್ಯಾ.ಕುನ್ಹಾ ಆಯೋಗ, ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಹೇಳಿತ್ತು. ಇದರಿಂದ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಮತ್ತೊಮ್ಮೆ ಯಾವುದೇ ದುರ್ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಲೀಗ್ ಆಯೋಜನೆಗೆ ನಿರಾಕರಿಸಿದೆ.
ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧ
ಮೈಸೂರಿನಲ್ಲಿಯೂ ಪಂದ್ಯಾವಳಿ ನಡೆಸಲು ಇಲ್ಲಿನ ನಗರ ಪೊಲೀಸ್ ಆಯುಕ್ತರು ಅನುಮತಿ ನೀಡಿದ್ದರೂ ಕೂಡ ಪಂದ್ಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳಿಲ್ಲದೆ ಪಂದ್ಯಗಳು ನಡೆಯಲಿವೆ. ಕೆಎಸ್‌ಸಿಎ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ 300 ರಿಂ 500 ಮಂದಿಗೆ ಮಾತ್ರ ಪಂದ್ಯ ವೀಕ್ಷಣಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಸಿಎ ಮೂಲಗಳು ತಿಳಿಸಿವೆ.
ಇದನ್ನೂ ಓದಿ ಶುಭಮನ್ ಗಿಲ್ ಔಟ್! IND vs ENG ಸಂಯೋಜನೆಯ ಪ್ಲೇಯಿಂಗ್ XI ಆರಿಸಿದ ಸ್ಟುವರ್ಟ್ ಬ್ರಾಡ್
ಮಹಾರಾಣಿ ಫೈನಲ್ ಕೂಡ ಅನುಮಾನ
ಚೊಚ್ಚಲ ಆವೃತ್ತಿಯ ಮಹಾರಾಣಿ ಟ್ರೋಫಿ ಆಲೂರಿನಲ್ಲಿ ನಡೆಯುತ್ತಿದೆ. ಆದರೆ ಫೈನಲ್ ಪಂದ್ಯ ಆ.10ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿತ್ತು. ಈ ಪಂದ್ಯ ಕೂಡಾ ಚಿನ್ನಸ್ವಾಮಿಯಲ್ಲಿ ನಡೆಯುವ ಸಾಧ್ಯತೆಯಿಲ್ಲ ಎನ್ನಲಾಗಿದೆ.