ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೌಂಟಿ ಕ್ರಿಕೆಟ್‌ನಲ್ಲೂ ಕಮಾಲ್‌ ಮಾಡಿದ ಮಾನವ್ ಸುತಾರ್; 5 ವಿಕೆಟ್‌ ಗೊಂಚಲು ಸಾಧನೆ

Manav Suthar: ಕೌಂಟಿ ಕ್ರಿಕೆಟ್‌ನಲ್ಲಿ ಎರಡು ಪಂದ್ಯಗಳನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದ ಸುತಾರ್, ಸೋಮರ್‌ಸೆಟ್‌ ತಂಡದ ಪರ ತಾವಾಡಿದ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 46.5 ಓವರ್‌ಗಳಲ್ಲಿ 100 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದರು. ಒಟ್ಟಾರೆ ಪಂದ್ಯದಲ್ಲಿ ಏಳು ವಿಕೆಟ್‌ಗಳನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ 18 ಓವರ್‌ಗಳಲ್ಲಿ 50 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದಿದ್ದರು.

Manav Suthar

ಲಂಡನ್‌, ಜೂ.23: ಅಫ್ಘಾನಿಸ್ತಾನ ವಿರುದ್ಧದ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಬೌಲಿಂಗ್‌ ಪ್ರದರ್ಶನದ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಕೆಲವು ದಿನಗಳ ನಂತರ, ಭಾರತದ ಯುವ ಸ್ಪಿನ್ನರ್‌ ಮಾನವ್ ಸುತಾರ್(Manav Suthar) ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌(County Championship)ನಲ್ಲಿ ತಮ್ಮ ಪ್ರಾಬಲ್ಯವನ್ನು ಮೆರೆದಿದ್ದಾರೆ. ವಾರ್ವಿಕ್‌ಷೈರ್ ಪರ ಸೋಮರ್‌ಸೆಟ್ ವಿರುದ್ಧ ಐದು ವಿಕೆಟ್ ಗೊಂಚಲು ಪಡೆದಿದ್ದಾರೆ.

ಕೌಂಟಿ ಕ್ರಿಕೆಟ್‌ನಲ್ಲಿ ಎರಡು ಪಂದ್ಯಗಳನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದ ಸುತಾರ್, ಸೋಮರ್‌ಸೆಟ್‌ ತಂಡದ ಪರ ತಾವಾಡಿದ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 46.5 ಓವರ್‌ಗಳಲ್ಲಿ 100 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದರು. ಒಟ್ಟಾರೆ ಪಂದ್ಯದಲ್ಲಿ ಏಳು ವಿಕೆಟ್‌ಗಳನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ 18 ಓವರ್‌ಗಳಲ್ಲಿ 50 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದಿದ್ದರು.

ಈ ತಿಂಗಳ ಆರಂಭದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗೊಂಚಲು ಪಡೆದು ಭಾರತಕ್ಕೆ ಭವಿಷ್ಯದ ಬೌಲರ್‌ ಎನಿಸಿಕೊಂಡಿದ್ದರು. ಎಡಗೈ ಸ್ಪಿನ್ನರ್ ಆಗಿರುವ ಅವರು ಎರಡು ಪಂದ್ಯಗಳಿಂದ 11 ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಅಲ್ಪಾವಧಿಯ ಇಂಗ್ಲಿಷ್ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ. ಯಾರ್ಕ್‌ಷೈರ್ ವಿರುದ್ಧದ ವಾರ್ವಿಕ್‌ಷೈರ್‌ನ ಚೊಚ್ಚಲ ಪಂದ್ಯದಲ್ಲಿ ಅವರು 4 ವಿಕೆಟ್‌ಗಳನ್ನು ಕಬಳಿಸಿದ್ದರು.

ಕೌಂಟಿ ಪಂದ್ಯಗಳಿಗೆ ವಾರ್ವಿಕ್‌ಷೈರ್‌ ತಂಡದ ಜತೆ ಮಾನವ್ ಸುತಾರ್ ಒಪ್ಪಂದ

ಟೌಂಟನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ, ಸೋಮರ್‌ಸೆಟ್ ಮೊದಲ ಇನ್ನಿಂಗ್ಸ್‌ನಲ್ಲಿ 208 ರನ್‌ಗಳಿಗೆ ಆಲೌಟ್ ಆಯಿತು, ಆಸ್ಟ್ರೇಲಿಯಾದ ಟೆಸ್ಟ್ ಆಲ್‌ರೌಂಡರ್ ಬ್ಯೂ ವೆಬ್‌ಸ್ಟರ್ 23 ರನ್‌ಗಳಿಗೆ 4 ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಸುತಾರ್ ಅವರ ಎರಡು ವಿಕೆಟ್‌ಗಳು ಪಡೆದರು. ಹಿಂದಿನ ಪಂದ್ಯದಲ್ಲಿ ಮೂರು ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳು ಸೇರಿದಂತೆ 33 ಮತ್ತು 37 ರನ್ ಗಳಿಸಿದ ನಂತರ ಸುತಾರ್ ಎರಡನೇ ಪಂದ್ಯದಲ್ಲಿ 28 ರನ್ ಗಳಿಸಿದರು.



23 ವರ್ಷದ ಮಾನವ್ ಸುತಾರ್ ಮೂಲತಃ ರಾಜಸ್ಥಾನದವರು. ಅವರು, ದೇಶೀಯ ಕ್ರಿಕೆಟ್‌ನಲ್ಲಿ ರಾಜಸ್ಥಾನ ತಂಡವನ್ನು ಪ್ರತಿನಿಧಿಸುತ್ತಾರೆ. ಎಡಗೈ ಸ್ಪಿನ್ ಬೌಲಿಂಗ್ ಜೊತೆ ಕೆಳಕ್ರಮಾಂಕದ ಬ್ಯಾಟರ್‌ ಕೂಡ ಆಗಿರುವ ಅವರು ಓರ್ವ ಪ್ರತಿಭಾವಂತ ಆಲ್‌ರೌಂಡರ್. 2022-23ರ ರಣಜಿ ಟ್ರೋಫಿ ಋತುವಿನಲ್ಲಿ ಅವರು ರಾಷ್ಟ್ರೀಯ ತಂಡದ ಆಯ್ಕೆದಾರರ ಗಮನ ಸೆಳೆದರು. ಕೇವಲ 6 ಪಂದ್ಯಗಳಲ್ಲಿ 39 ವಿಕೆಟ್‌ಗಳನ್ನು ಗಳಿಸುವ ಮೂಲಕ ರಾಜಸ್ಥಾನದ ಪ್ರಮುಖ ವಿಕೆಟ್ ಪಡೆದ ಬೌಲರ್ ಆಗಿ ಸ್ಥಾನ ಪಡೆದರು.