ಮುಂಬೈ: ಆಲ್ ರೌಂಡರ್ ಮಿಚೆಲ್ ಮಾರ್ಷ್ ವೈಯಕ್ತಿಕ ಕಾರಣಗಳಿಗಾಗಿ ಸ್ವದೇಶಕ್ಕೆ ಮರಳುತ್ತಿದ್ದು, ಇದರಿಂದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಕನಸು ಕಾಣುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ.
ಇಂಗ್ಲೆಂಡ್ ವಿರುದ್ಧದ ಮಹತ್ವದ ಪಂದ್ಯಕ್ಕೆ ಎರಡು ದಿನ ಬಾಕಿ ಇರುವಾಗ ಮಿಚೆಲ್ ಮಾರ್ಷ್ ಅವರ ಸೇವೆಯನ್ನು ಕಳೆದುಕೊಳ್ಳಲಿದೆ.
ತಂಡದ ಪ್ರಮುಖ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಗಾಯಗೊಂಡು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಮತ್ತೊಬ್ಬ ಆಲ್ ರೌಂಡರ್ ಸೇವೆ ಕೂಡ ಲಭಿಸದೇ ಇರುವುದು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ತಲೆನೋವು ತಂದಿದೆ.
ಆಲ್ ರೌಂಡರ್ ಜಾಗ ತುಂಬಲು ಕೆಮರೂನ್ ಗ್ರೀನ್, ಸೀನ್ ಅಬೊಟ್, ಅಲೆಕ್ಸ್ ಕ್ಯಾರಿ ನಡುವೆ ಪೈಪೋಟಿ ಆರಂಭಗೊಂಡಿದೆ. ಆದರೆ ತಂಡ ವಿಶ್ವಕಪ್ ಸೆಮಿಫೈನಲ್ ತಲುಪಲು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು, ಅಂಕಪಟ್ಟಿಯಲ್ಲಿ ಸಮಾನ ಸ್ಥಾನ ಪಡೆದಿರುವ ಇಂಗ್ಲೆಂಡ್ ವಿರುದ್ಧ ಗೆಲ್ಲಬೇಕಾಗಿದೆ.