ಮೆಸ್ಸಿ 3 ದಿನದ ಭಾರತ ಪ್ರವಾಸಕ್ಕೆ ಆಯೋಜಕರು ಖರ್ಚು ಮಾಡಿದ್ದು ಎಷ್ಟು ಕೋಟಿ?
Messi India tour: ಸಾಲ್ಟ್ ಲೇಕ್ ಮೈದಾನದಲ್ಲಿ ಉಂಟಾದ ಅವ್ಯವಸ್ಥೆಗೆ ತನ್ನ ಹೆಸರನ್ನು ತಳುಕುಹಾಕಿ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆ ನೀಡಿದ ಫುಟ್‌ಬಾಲ್ ಕ್ಲಬ್ ವಿರುದ್ಧ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೌರವ್ ಗಂಗೂಲಿ ₹ 50 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
Lionel Messi -
ಮುಂಬಯಿ, ಡಿ. 21: 3 ದಿನಗಳ ಕಾಲ‘ಗೋಟ್’ ಪ್ರವಾಸಕ್ಕೆ ಭಾರತಕ್ಕೆ ಆಗಮಿಸಿದ ಅರ್ಜೆಂಟೀನಾದ ಫುಟ್ಬಾಲ್ ದಿಗ್ಗಜ ಲಿಯೋನಲ್ ಮೆಸ್ಸಿ(Lionel Messi)ಗೆ ₹89 ಕೋಟಿ ಪಾವತಿಸಲಾಗಿದೆ. ₹11 ಕೋಟಿ ತೆರಿಗೆ ಭಾರತ ಸರ್ಕಾರಕ್ಕೆ ಪಾವತಿಸಲಾಗಿದೆ, ಒಟ್ಟು ₹ 100 ಕೋಟಿ ವೆಚ್ಚವಾಗಿದೆ ಎಂದು ಕಾರ್ಯಕ್ರಮ ಆಯೋಜಿಸಿದ್ದ ಸತಾದ್ರು ದತ್ತಾ(Satadru Dutta) ಎಸ್ಐಟಿ ವಿಚಾರಣೆ ವೇಳೆ ಹೇಳಿದ್ದಾರೆ.
ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಪ್ರೇಕ್ಷಕರು ದುಬಾರಿ ಟಿಕೆಟ್‌ಗಳನ್ನು ಖರೀದಿಸಿದ್ದರು. ಆದರೆ ಮೈದಾನದಲ್ಲಿ ಮೆಸ್ಸಿಯ ಸುತ್ತಲೂ ಹೆಚ್ಚಿನ ಸಂಖ್ಯೆಯ ಜನರು ನೆರೆದಿದ್ದರಿಂದ ಕಾರ್ಯಕ್ರಮವು ಅವ್ಯವಸ್ಥೆಗೆ ಕಾರಣವಾಯಿತು. ಗ್ಯಾಲರಿಗಳಲ್ಲಿ ಕುಳಿತಿದ್ದ ಅಭಿಮಾನಿಗಳಿಗೆ ಮೆಸ್ಸಿಯನ್ನು ನೋಡಲು ಸಾಧ್ಯವಾಗಲಿಲ್ಲ. ಇದರಿಂದ ಕೋಪಗೊಂಡ ಅಭಿಮಾನಿಗಳು ದಾಂದಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ದತ್ತಾ ಅವರನ್ನು ಬಂಧಿಸಿ ಎಸ್ಐಟಿ ವಿಚಾರಣೆ ನಡೆಸುತ್ತಿದೆ. ವೆಚ್ಚದ ಶೇ 30ರಷ್ಟು ಪ್ರಯೋಜಕರಿಂದ ಶೇ 30ರಷ್ಟು ಟಿಕೆಟ್ ಮಾರಾಟದಿಂದ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
‘ಬ್ಯಾಂಕ್ ಖಾತೆಯಲ್ಲಿರುವ ಹಣವು ಕೋಲ್ಕತ್ತ ಮತ್ತು ಹೈದರಾಬಾದ್‌ನಲ್ಲಿ ನಡೆದ ಮೆಸ್ಸಿ ಕಾರ್ಯಕ್ರಮದ ಟಿಕೆಟ್‌ಗಳನ್ನು ಮಾರಾಟದಿಂದ ಮತ್ತು ಪ್ರಾಯೋಜಕರಿಂದ ಪಡೆದ ಹಣʼ ಎಂದು ದತ್ತಾ ಹೇಳಿಕೊಂಡಿದ್ದಾರೆ.
50 ಕೋಟಿ ಮಾನನಷ್ಟ ದಾವೆ ಹೂಡಿದ ಗಂಗೂಲಿ
ಸಾಲ್ಟ್ ಲೇಕ್ ಮೈದಾನದಲ್ಲಿ ಉಂಟಾದ ಅವ್ಯವಸ್ಥೆಗೆ ತನ್ನ ಹೆಸರನ್ನು ತಳುಕುಹಾಕಿ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆ ನೀಡಿದ ಫುಟ್‌ಬಾಲ್ ಕ್ಲಬ್ ವಿರುದ್ಧ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೌರವ್ ಗಂಗೂಲಿ ₹ 50 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಇದನ್ನೂ ಓದಿ U19 Asia Cup Final: ಸೇಡು ತೀರಿಸಿಕೊಂಡ ಪಾಕ್; ಅಂಡರ್-19 ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು
ಪೊಲೀಸ್ ದೂರಿನ ಜತೆಗೆ, ಫುಟ್‌ಬಾಲ್ ಕ್ಲಬ್‌ನ ಅಧಿಕಾರಿಗಳಿಗೆ ₹ 50 ಕೋಟಿಯ ಕಾನೂನು ನೋಟಿಸ್ ಕಳುಹಿಸಿದ್ದೇನೆ’ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. ಮೆಸ್ಸಿ ಅವರ ‘ಗೋಟ್’ ಪ್ರವಾಸದ ನಿಜವಾದ ರೂವಾರಿ ಸೌರವ್ ಗಂಗೂಲಿ, ಆದರೆ ಈಗ ಬಂಧಿತರಾಗಿರುವ ಪ್ರಮುಖ ಆಯೋಜಕ ಸತಾದ್ರು ದತ್ತಾ ಕೇವಲ ಮುಖ ಮಾತ್ರ’ ಎಂದು ಕೆಲ ದಿನಗಳ ಹಿಂದೆ ಪತ್ರಕರ್ತರೊಂದಿಗೆ ಮಾತನಾಡುವಾಗ ಸಾಹಾ ಹೇಳಿದ್ದರು.