Thursday, 12th December 2024

ಮುಂಬೈಗೆ ವಾರ್ನರ್ ಬಳಗದ ಸವಾಲು

ಶಾರ್ಜಾ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳು ಮುಖಾಮುಖಿಯಾಗ ಲಿವೆ.

ಉಭಯ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿವೆ. ಎರಡರಲ್ಲಿ ಗೆದ್ದು, ಅಷ್ಟೇ ಪಂದ್ಯ ಗಳನ್ನು ಸೋತಿವೆ. ಕಳೆದ ಶುಕ್ರ ವಾರದ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡ ಮೊದಲು ಬ್ಯಾಟಿಂಗ್ ಮಾಡಿ ಸಾಧಾರಣ ಮೊತ್ತ ಗಳಿಸಿತ್ತು. ಆದರೂ ಏಳು ರನ್ ‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್‌ ಎದುರು ಜಯಿಸಿತು.

ಬೌಲಿಂಗ್ ವಿಭಾಗದಲ್ಲಿ ಸನ್‌ರೈಸರ್ಸ್‌ಗೆ ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಬದಲಿಗೆ ಎಡಗೈ ವೇಗಿ ಖಲೀಲ್ ಅಹಮದ್, ಸ್ಪಿನ್ನರ್ ರಶೀದ್ ಖಾನ್ ಮೇಲೆ ಹೆಚ್ಚಿನ ಹೊಣೆ ಬೀಳಲಿದೆ. ಭುವಿ ಬದಲಿಗೆ ಸಿದ್ಧಾರ್ಥ್ ಕೌಲ್ ಅವಕಾಶ ಪಡೆಯಬಹುದು.

ಚಾಂಪಿಯನ್ ಮುಂಬೈ ತಂಡದಲ್ಲಿ ರೋಹಿತ್ ಒಟ್ಟು ಎರಡು ಅರ್ಧಶತಕ ಬಾರಿಸಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಸಿಕ್ಸರ್‌ಗಳ ಚಿತ್ತಾರ ಬಿಡಿಸುವ ಜೋಡಿ ಎಂದು ಈಗಾಗಲೇ ಸಾಬೀತಾ ಗಿದೆ. ಬೌಲಿಂಗ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ರಾಹುಲ್ ಚಾಹರ್ ಮತ್ತು ಜೇಮ್ಸ್ ಪ್ಯಾಟಿನ್ಸನ್ ಉತ್ತಮ ಬೌಲಿಂಗ್ ಮಾಡುತ್ತಿರು ವುದು ಮುಂಬೈ ಆತ್ಮವಿಶ್ವಾಸ ಹೆಚ್ಚಿಸಿದೆ.