Wednesday, 11th December 2024

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ದುಬೈ : ಮುಂಬೈ ಹಾಗೂ ಡೆಲ್ಲಿಯ ನಡುವೆ ಸೆಣೆಸಾಟ ನಡೆಯಲಿದೆ. ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.

ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ತಂಡ ಈ ಬಾರಿ ಉತ್ತಮ ಲಯದಲ್ಲಿದೆ.  ಡೆಲ್ಲಿ ಕ್ಯಾಪಿಟಲ್ಸ್‌ ಕೂಡ ಆರ್‌ಸಿಬಿಯಂತೆ 2 ಅಂಕ ಗಳ ಹುಡುಕಾಟದಲ್ಲಿದೆ.

ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಹಂತಕ್ಕೆ ದಾಪುಗಾಲಿಟ್ಟ ಮೊದಲ ತಂಡವಾಗಿದ್ದು. ಮೊದಲ ಸುತ್ತಿನಲ್ಲಿ ಉಳಿದ ಪಂದ್ಯದಲ್ಲಿ ಸೋತರೂ ಮುಂದಿನ ಸುತ್ತಿನ ಲೆಕ್ಕಚಾರಕ್ಕೆ ಅಡ್ಡಿಯಾಗಲ್ಲ. ಮುಂಬೈ 16 ಅಂಕದೊಂದಿಗೆ ಅಗ್ರಸ್ಥಾನಿಯಾಗಿ ನೆಲೆಯೂರಿದೆ. ಬ್ಯಾಟಿಂಗ್‌ ಲೈನ್‌ಅಪ್‌ ಸೂಪರ್ಬ್.

ಮುಂಬೈ ಇಂಡಿಯನ್ಸ್ : ಕ್ವಿಂಟನ್ ಡಿ ಕಾಕ್ (ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ದೆಹಲಿ ರಾಜಧಾನಿಗಳು (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರವಿಚಂದ್ರನ್ ಅಶ್ವಿನ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ.