ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಧ್ಯಪ್ರಾಚ್ಯ ಸಂಘರ್ಷ; ಭಾರತದಲ್ಲೇ ಸಿಲುಕಿಕೊಂಡ ವೆಸ್ಟ್ ಇಂಡೀಸ್, ಜಿಂಬಾಬ್ವೆ ವಿಶ್ವಕಪ್ ತಂಡಗಳು

Middle East Conflict: ಈ ತಿಂಗಳ ಕೊನೆಯಲ್ಲಿ ಆರಂಭಗೊಳ್ಳಬೇಕಿರುವ ಐಪಿಎಲ್‌ಗಾಗಿ ಕೆಲ ತಂಡಗಳು ಈಗಾಗಲೇ ಅಭ್ಯಾಸ ಶಿಬಿರ ಆರಂಭಿಸಿದೆ. ಇದಕ್ಕಾಗಿ ಕೆಲ ವಿದೇಶಿ ಆಟಗಾರರು ಭಾರತಕ್ಕೆ ಪ್ರಯಾಣಿಸುವ ಸಿದ್ಧತೆಯಲ್ಲಿದ್ದರು. ಆದರೆ ಯುದ್ಧ ಸ್ಥಿತಿ ನಿರ್ಮಾಣವಾಗಿರುವುದರಿಂದ ಅವರ ಭಾರತ ಪ್ರಯಾಣ ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಭಾರತದಲ್ಲೇ ಸಿಲುಕಿಕೊಂಡ ವಿಂಡೀಸ್, ಜಿಂಬಾಬ್ವೆ ವಿಶ್ವಕಪ್ ತಂಡಗಳು

West Indies Team -

Abhilash BC
Abhilash BC Mar 3, 2026 11:41 AM

ನವದೆಹಲಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ(Middle East Conflict)ಯಿಂದಾಗಿ ಜಾಗತಿಕ ಮಟ್ಟದ ವ್ಯಾಪಾರ ವಹಿವಾಟು, ಜನಜೀವನದ ಮೇಲೆ ಪರಿಣಾಮ ಬೀರಿದ್ದು ಮಾತ್ರವಲ್ಲದೇ, ವಿಶ್ವದ ಹಲವು ಭಾಗಗಳಲ್ಲಿ ಕ್ರೀಡಾಪಟುಗಳು, ಕ್ರೀಡಾ ಚಟುವಟಿಕೆ ಮೇಲೂ ಕಾರ್ಮೋಡ ಕವಿದಿದೆ. ಟಿ20 ವಿಶ್ವಕಪ್‌ ಆಡಲು ಬಂದಿದ್ದ ವೆಸ್ಟ್‌ ಇಂಡೀಸ್‌ ಮತ್ತು ಜಿಂಬಾಬ್ವೆ ತಂಡಗಳು ಸ್ಪರ್ಧೆಯಿಂದ ನಿರ್ಗಮಿಸಿದರೂ ಅಂತರರಾಷ್ಟ್ರೀಯ ವಾಯುಪ್ರದೇಶದ ನಿರ್ಬಂಧಗಳಿಂದಾಗಿ ಭಾರತದಲ್ಲೇ ಉಳಿಯುವಂತಾಗಿದೆ.

ಆಟಗಾರರು ಮತ್ತು ಸಿಬ್ಬಂದಿಗಳ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮತ್ತು ಸಂಬಂಧಿತ ಸರ್ಕಾರಿ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.

"ಐಸಿಸಿ ಪುರುಷರ ಟಿ20 ವಿಶ್ವಕಪ್‌ನಿಂದ ಹೊರಬಿದ್ದ ನಂತರ, ವೆಸ್ಟ್ ಇಂಡೀಸ್ ಹಿರಿಯ ಪುರುಷರ ತಂಡವು ಭಾರತದಿಂದ ನಿರ್ಗಮಿಸುವುದು ಅಂತರರಾಷ್ಟ್ರೀಯ ವಾಯುಪ್ರದೇಶದ ನಿರ್ಬಂಧಗಳಿಂದಾಗಿ ವಿಳಂಬವಾಗಿದೆ ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕೋಲ್ಕತ್ತಾದಲ್ಲಿ ಭಾರತದ ವಿರುದ್ಧ ಗೆಲ್ಲಲೇಬೇಕಾದ ಸೂಪರ್ ಎಂಟನೇ ಪಂದ್ಯದಲ್ಲಿ ಸೋತ ನಂತರ ವೆಸ್ಟ್ ಇಂಡೀಸ್ ತಂಡವು ಪಂದ್ಯಾವಳಿಯಿಂದ ಹೊರಬಿತ್ತು.

ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಹಾನಿ ಸಂಭವಿಸಿದ್ದು, ಭದ್ರತಾ ಕಾಳಜಿ ಹೆಚ್ಚಾದ ಕಾರಣ ಗಲ್ಫ್ ಪ್ರದೇಶದ ಕೆಲವು ಭಾಗಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಭಾರತ vs ಇಂಗ್ಲೆಂಡ್‌ ಟಿ20 ವಿಶ್ವಕಪ್‌ ಸೆಮಿಫೈನಲ್ ಗೆದ್ದೋರು ಚಾಂಪಿಯನ್‌ ಫಿಕ್ಸ್‌!

ಈ ಅಡಚಣೆಯಿಂದ ಜಿಂಬಾಬ್ವೆ ತಂಡವೂ ತೊಂದರೆಗೀಡಾಗಿದೆ. ಜಿಂಬಾಬ್ವೆ ತಂಡದ ಆಟಗಾರರು ಸದ್ಯ ದೆಹಲಿಯಲ್ಲಿಯೇ ಉಳಿದಿದ್ದು, ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ದೃಢಪಡಿಸಿದೆ. ತಂಡವು ದುಬೈ ಮೂಲಕ ತವರಿಗೆ ಮರಳಬೇಕಿತ್ತು, ಆದರೆ ಮಧ್ಯಪ್ರಾಚ್ಯದಲ್ಲಿ ಉಂಟಾಗುತ್ತಿರುವ ಪರಿಸ್ಥಿತಿಯಿಂದಾಗಿ ಅದರ ಪ್ರಯಾಣ ಯೋಜನೆಗಳ ಮೇಲೆ ಪರಿಣಾಮ ಬೀರಿತು. ಭಾನುವಾರ ನಡೆದ ತನ್ನ ಕೊನೆಯ ಸೂಪರ್ ಎಂಟನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಐದು ವಿಕೆಟ್‌ ಅಂತರದ ಸೋಲು ಕಂಡಿತ್ತು.

ಐಸಿಸಿ ತುರ್ತು ಕ್ರಮಗಳನ್ನು ಸಕ್ರಿಯಗೊಳಿಸಿದ್ದು, ಪರ್ಯಾಯ ವ್ಯವಸ್ಥೆಗಳನ್ನು ಪಡೆಯಲು ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಈ ತಿಂಗಳ ಕೊನೆಯಲ್ಲಿ ಆರಂಭಗೊಳ್ಳಬೇಕಿರುವ ಐಪಿಎಲ್‌ಗಾಗಿ ಕೆಲ ತಂಡಗಳು ಈಗಾಗಲೇ ಅಭ್ಯಾಸ ಶಿಬಿರ ಆರಂಭಿಸಿದೆ. ಇದಕ್ಕಾಗಿ ಕೆಲ ವಿದೇಶಿ ಆಟಗಾರರು ಭಾರತಕ್ಕೆ ಪ್ರಯಾಣಿಸುವ ಸಿದ್ಧತೆಯಲ್ಲಿದ್ದರು. ಆದರೆ ಯುದ್ಧ ಸ್ಥಿತಿ ನಿರ್ಮಾಣವಾಗಿರುವುದರಿಂದ ಅವರ ಭಾರತ ಪ್ರಯಾಣ ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.