Saturday, 14th December 2024

ಸಿಎಸ್ಕೆ ಮೇಲೆ ಮಿಲ್ಲರ್‌ ಸವಾರಿ

ಮುಂಬೈ: ಭಾನುವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೂರು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಕಲೆ ಹಾಕಿತು. ರುತುರಾಜ್ ಗಾಯಕ್ವಾಡ್ 43 ಎಸೆತಗಳಲ್ಲಿ 73 ರನ್ ಸಿಡಿಸಿದರೆ, ಅಂಬಾಟಿ ರಾಯುಡು 31 ಎಸೆತಗಳಲ್ಲಿ 46 ರನ್ ಗಳಿಸಿ ದರು.

ರವೀಂದ್ರ ಜಡೇಜಾ 12 ಎಸೆತಗಳಲ್ಲಿ 22 ರನ್ ಕಲೆಹಾಕಿದರು. ಗುಜರಾತ್ ಟೈಟನ್ಸ್ ಪರ ಅಲ್ವಾರಿ ಜೋಸೆಫ್ 2, ಮೊಹಮ್ಮದ್ ಶಮಿ ಹಾಗೂ ಯಶ್ ದಯಾಳ್ ತಲಾ ಒಂದು ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 169 ರನ್ ಗಳು ಗುರಿ ಬೆನ್ನತ್ತಿದ್ದ ಗುಜರಾತ್ ಟೈಟನ್ಸ್ 19.5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಗಳಿಸುವುದರೊಂದಿಗೆ ಗೆಲುವಿನ ನಗೆ ಬೀರಿತು. ಗುಜರಾತ್ ಟೈಟನ್ಸ್ ಪರ ಡೇವಿಡ್ ಮಿಲ್ಲರ್ 51 ಎಸೆತಗಳಲ್ಲಿ 94 ರನ್ ಗಳಿಸಿದರೆ, ರಶೀದ್ ಖಾನ್ 40, ಅಭಿನವ್ ಮನೋಹರ್ 12 ರನ್ ಗಳಿಸಿದರು.