Thursday, 3rd October 2024

ಆಸ್ಟ್ರೇಲಿಯಾ ಟಿ20 ತಂಡಕ್ಕೆ ಮಿಚೆಲ್​ ಮಾರ್ಷ್​ ನಾಯಕ

ಸಿಡ್ನಿ (ಆಸ್ಟ್ರೇಲಿಯಾ): ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ಗೆ ಇನ್ನು ಕೇವಲ ಎರಡು ತಿಂಗಳು ಬಾಕಿ ಇದೆ. ಹೀಗಿರುವಾಗ ಕ್ರಿಕೆಟ್​ ಆಸ್ಟ್ರೇಲಿಯಾ ವಿಶ್ವಕಪ್​ಗೆ ತೆರಳುವ ತಂಡವನ್ನು ಈಗಾಗಲೇ ಪ್ರಕಟಿಸಿದೆ.

ಸದ್ಯ 18 ಜನ ಆಟಗಾರರ ತಂಡವನ್ನು ಮಾಡಿದ್ದು, ವಿಶ್ವಕಪ್​ ವೇಳೆಗೆ ಇವರಲ್ಲಿ ಮೂವರನ್ನು ಕೈಬಿಟ್ಟು 15 ಜನರನ್ನು ಆಯ್ಕೆ ಮಾಡಿಕೊಳ್ಳಲಿದೆ. ರಚಿಸಿರುವ ತಂಡದಲ್ಲಿ ಕೆಲ ಅಚ್ಚರಿಯ ಆಯ್ಕೆಗಳೂ ನಡೆದಿದೆ.

ವಿಶ್ವಕಪ್​ ತಂಡಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್​​ ಸಂಸ್ಥೆ (ಐಸಿಸಿ) ಸಪ್ಟೆಂಬರ್​ 28ರ ಒಳಗೆ ಆಟಗಾರರನ್ನು ಅಂತಿಮಗೊಳಿಸ ಬೇಕು ಎಂದಿದೆ. 2023ರ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಅಕ್ಟೋಬರ್​ 8 ರಂದು ಭಾರತದ ವಿರುದ್ಧ ಚೆನ್ನೈನ ಮೈದಾನದಲ್ಲಿ ಮೊದಲ ಪಂದ್ಯವನ್ನು ಆಡಲಿದೆ.

1987, 1999, 2003, 2007 ಮತ್ತು 2015 ರ ಹಿಂದಿನ ಯಶಸ್ಸಿನ ನಂತರ ಆಸ್ಟ್ರೇಲಿಯಾ ಆರನೇ ವಿಶ್ವಕಪ್ ಪ್ರಶಸ್ತಿ ಪಡೆದುಕೊಳ್ಳಬಹುದು ಎಂದು ಬೈಲಿ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಟಿ20 ತಂಡದ ಉತ್ತರಾಧಿಕಾರಿ ಮಿಚೆಲ್ ಮಾರ್ಷ್ ಅವರನ್ನು ನೇಮಕ ಮಾಡಲಾಗಿದೆ. 2021 ಟಿ20 ವಿಶ್ವಕಪ್​ ಗೆಲ್ಲಿಸಿಕೊಟ್ಟ ನಾಯಕ ಪಿಂಚ್,​ 2022ರ ಟಿ20 ವಿಶ್ವಕಪ್​ ನಂತರ ನಿವೃತ್ತಿ ಘೋಷಿಸಿದ್ದರು.

ಆಸ್ಟ್ರೇಲಿಯಾದ ಏಕದಿನ ವಿಶ್ವಕಪ್ ತಂಡ : ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಸ್ಟೀವ್ ಸಂಘ , ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ದಕ್ಷಿಣ ಆಫ್ರಿಕಾ ಪ್ರವಾಸದ ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆಂಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ.