Thursday, 12th December 2024

ಇಯಾನ್ ಮೋರ್ಗನ್ ಅಂತರರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತಿ…?

ಲಂಡನ್‌: ವಿಶ್ವ ಚಾಂಪಿಯನ್​ ಇಂಗ್ಲೆಂಡ್‌ ತಂಡದ ನಾಯಕ ಇಯಾನ್ ಮೋರ್ಗನ್ ಶೀಘ್ರದಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತಿ ಹೊಂದಲಿ ದ್ದಾರೆ ಎನ್ನಲಾಗಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮೋರ್ಗನ್ ಕ್ರಿಕೆಟ್ ಅಂಗಳಕ್ಕೆ ಗುಡ್​ ಬೈ ಹೇಳಲು ಬಯಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಸರಣಿ ಇಯಾನ್ ಮೋರ್ಗನ್ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಹೇಳಲಾ ಗುತ್ತಿದೆ.  ಮೋರ್ಗನ್ ನಿವೃತ್ತಿಯ ಬಳಿಕ ಜೋಸ್ ಬಟ್ಲರ್ ಹೊಸ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹಂಗಾಮಿ ನಾಯಕನಾಗಿ ಕಾಣಿಸಿಕೊಂಡಿರುವ ಬಟ್ಲರ್, ತಂಡದ ಉಪನಾಯಕ ರಾಗಿಯೂ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಬಟ್ಲರ್ ಅವರನ್ನು ಸೀಮಿತ ಓವರ್​ಗಳ ತಂಡಕ್ಕೆ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಟೆಸ್ಟ್ ಕ್ರಿಕೆಟ್​ನಲ್ಲಿ ಜೋ ರೂಟ್ ಬದಲಿಗೆ ಇತ್ತೀಚೆಗಷ್ಟೇ ನಾಯಕರಾಗಿ ಬೆನ್ ಸ್ಟೋಕ್ಸ್ ಆಯ್ಕೆಯಾಗಿದ್ದರು.

ಕಳೆದ ಎರಡು ವರ್ಷಗಳಿಂದ ಮೋರ್ಗನ್ ನೆದರ್ಲೆಂಡ್ಸ್ ವಿರುದ್ಧದ ಸರಣಿಯಲ್ಲೂ ಎರಡು ಬಾರಿ ಖಾತೆ ತೆರೆಯಲು ವಿಫಲರಾಗಿದ್ದರು. ಈ ವರ್ಷ ಟಿ20 ವಿಶ್ವಕಪ್ ಹಾಗೂ ಮುಂದಿನ ವರ್ಷ ಏಕದಿನ ವಿಶ್ವಕಪ್ ನಡೆಯಲಿದೆ. ಇದಕ್ಕೂ ಮುನ್ನ ಬಲಿಷ್ಠ ಪಡೆ ಯನ್ನೇ ರೂಪಿಸಲು ಇಸಿಬಿ ಪ್ಲ್ಯಾನ್ ರೂಪಿಸಿದೆ.

2019ರ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ಮೋರ್ಗನ್, ಕೆಲ ಸಮಯದಿಂದ ಕಳಪೆ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ನಲ್ಲಿ ಈ ಹಿಂದೆ ಕೆಕೆಆರ್ ತಂಡದ ನಾಯಕರಾಗಿ ಕೂಡ ವಿಫಲವಾಗಿದ್ದರು. ಹೀಗಾಗಿ ಕಳೆದ ವರ್ಷ ನಡೆದ ಮೆಗಾ ಹರಾಜಿನಲ್ಲಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರ ಲಿಲ್ಲ.