ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಂಪಿಯನ್ಸ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಲ್ಲು ತೂರಾಟ; ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪೊಲೀಸರು!

ಭಾನುವಾರ ರಾತ್ರಿ ಇಂದೋರ್‌ ಜಿಲ್ಲೆಯ ಮಹು ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಐದು ಹಿಂಸಾಚಾರ ಘಟನೆಗಳು ನಡೆದಿತ್ತು. ಮೂರು ಕಾರುಗಳು ಮತ್ತು ಹಲವಾರು ದ್ವಿಚಕ್ರ ವಾಹನಗಳ ಮೇಲೆ ದಾಳಿ ಮಾಡಿ ಅವುಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದು ಪೊಲೀಸರು ಹೇಳಿದ್ದರು.

ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪೊಲೀಸರು!

Profile Abhilash BC Mar 12, 2025 12:31 PM

ಇಂದೋರ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿ(Champions Trophy) ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಂಭ್ರಮಿಸಿ ಮಧ್ಯಪ್ರದೇಶದ(MP Police) ಮಹು ಪಟ್ಟಣದಲ್ಲಿ ನಡೆಸಲಾಗುತ್ತಿದ್ದ ಮೆರವಣಿಗೆ(Champions Trophy celebration mp) ಮೇಲೆ ಕಲ್ಲು ತೂರಾಟ ನಡೆಸಿ ಬಂಧನಕ್ಕೆ ಒಳಗಾಗಿದ್ದ13 ಮಂದಿಗೆ ಪೊಲೀಸರು ತಕ್ಕ ಶಿಕ್ಷೆ ನೀಡಿದ್ದಾರೆ. ತಲೆ ಬೋಳಿಸಿ ದೇವಾಸ್ ನಗರದ ರಸ್ತೆಯಲ್ಲಿ ಇವರ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡಿದ್ದಾರೆ. ತಲೆ ಬೋಳಿಸಿದ ಯುವಕರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾದ ವಿಡಿಯೊಗಳು ವೈರಲ್ ಆಗಿದೆ. ಪೊಲೀಸರ ಈ ವರ್ತನೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದು, ಆ ಯುವಕರು ಅಪರಾಧಿಗಳಲ್ಲ, ಆದ್ದರಿಂದ ಅವರ ತಲೆ ಬೋಳಿಸಿ ಸಾರ್ವಜನಿಕವಾಗಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಕೃತ್ಯ ಖಂಡನೀಯ ಎಂದು ಹೇಳಿದ್ದಾರೆ.

ಇದನ್ನೂ ಓದಿ Rohit Sharma: ಚಾಂಪಿಯನ್ಸ್‌ ಟ್ರೋಫಿ ಗೆಲುವಿನ ಬಗ್ಗೆ ರೋಹಿತ್‌ ಮನದಾಳದ ಮಾತು

ಭಾನುವಾರ ರಾತ್ರಿ ಇಂದೋರ್‌ ಜಿಲ್ಲೆಯ ಮಹು ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಐದು ಹಿಂಸಾಚಾರ ಘಟನೆಗಳು ನಡೆದಿತ್ತು. ಮೂರು ಕಾರುಗಳು ಮತ್ತು ಹಲವಾರು ದ್ವಿಚಕ್ರ ವಾಹನಗಳ ಮೇಲೆ ದಾಳಿ ಮಾಡಿ ಅವುಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದು ಪೊಲೀಸರು ಹೇಳಿದ್ದರು. ಘಟನೆ ಬಗ್ಗೆ ಇಂದೋರ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಕೂಡ ಹೇಳಿಕೆ ನೀಡಿ, ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಈವರೆಗೆ 13 ಜನರನ್ನು ಪೊಲೀಸರು ಬಂಧಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಕೆಲವು ವಿಡಿಯೊಗಳು ಸಹ ‌‌‌‌ದೊರಕಿವೆ ಎಂದು ಸಿಂಗ್‌ ಸುದ್ದಿಗಾರರಿಗೆ ತಿಳಿಸಿದ್ದರು.



ಘಟನೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳು ಅಥವಾ ಸಂದೇಶಗಳನ್ನು ಹರಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಾರ್ಚ್‌ 9, ಭಾನುವಾರ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲೆಂಡ್, ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್‌ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್‌ಗಳ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ರೋಹಿತ್ ಶರ್ಮ(76) ಅವರ ಅರ್ಧಶತಕ ಮತ್ತು ಕೊನೆಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟರು.