ಡೆಹರಾಡೂನ್: ಮುಂಬರುವ ಐಪಿಎಲ್ ಟೂರ್ನಿಗೆ ಸಿದ್ಧತೆ ನಡೆಸುತ್ತಿರುವ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್ ಧೋನಿ(MS Dhoni) ಅವರು ತಮ್ಮ ಪತ್ನಿ ಸಾಕ್ಷಿ ಸಿಂಗ್(Sakshi Dhoni) ಜತೆ ಉತ್ತಾರಖಂಡ್‌ನ ಸಾಂಪ್ರದಾಯಿಕ ಪಹಾಡಿ ಗರ್ವಾಲಿ ನೃತ್ಯ ಮಾಡಿರುವ ವಿಡಿಯೊವೊಂದು ವೈರಲ್ ಆಗಿದೆ.
ಧೋನಿ ಅವರು ಪತ್ನಿ ಮತ್ತು ಇಲ್ಲಿನ ಸ್ಥಳೀಯರ ಜತೆಗೂಡಿ ಸಕ್ಕತ್ ಆಗಿ ಗರ್ವಾಲಿ ನೃತ್ಯ ಮಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಈ ವಿಡಿಯೊವನ್ನು ಸಾಕ್ಷಿ ಸಿಂಗ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಧೋನಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ. ಆದರೆ, ಧೋನಿ ಪ್ರವಾಸದ ಫೋಟೊಗಳನ್ನು ಅವರ ಮಗಳು ಮತ್ತು ಪತ್ನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಧೋನಿ ಅವರನ್ನು ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅನ್‌ಕ್ಯಾಪ್ಟ್ ನಿಯಮದ ಅಡಿಯಲ್ಲಿ 4 ಕೋಟಿ ರೂ. ನೀಡಿ ತಂಡಕ್ಕೆ ರಿಟೇನ್ ಮಾಡಿತ್ತು. ಧೋನಿ ಈ ಬಾರಿ ಇಂಪ್ಯಾಕ್ಟ್ ಆಟಗಾರನಾಗಿ ಆಡಲಿದ್ದಾರೆ ಎನ್ನಲಾಗಿದೆ. ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನ್ಯೂಜಿಲ್ಯಾಂಡ್‌ನ ಡೆವೊನ್ ಕಾನ್ವೇ ನಿರ್ವಹಿಸಬಹುದು.
ಇದನ್ನೂ ಓದಿ MS Dhoni: ಥಾಯ್ಲೆಂಡ್ ಬೀಚ್‌ನಲ್ಲಿ ಧೋನಿ ಎಂಜಾಯ್; ವಿಡಿಯೊ ವೈರಲ್
ಇತ್ತೀಚೆಗೆ ಧೋನಿ ತಮ್ಮ ಪತ್ನಿ ಮತ್ತು ಮಗಳ ಜತೆ ಥಾಯ್ಲೆಂಡ್(MS Dhoni vacation in Thailand) ಪ್ರವಾಸದಲ್ಲಿ ಎಂಜಾಯ್ ಮಾಡಿದ ಫೋಟೊ ಮತ್ತು ವಿಡಿಯೊಗಳು ವೈರಲ್ ಆಗಿತ್ತು. ಪ್ರವಾಸದಲ್ಲಿ ಧೋನಿ ಮೋಜು ಮಸ್ತಿ ಮಾಡುತ್ತಿರುವ ಫೋಟೊಗಳನ್ನು ಪುತ್ರಿ ಝೀವಾ(Ziva) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಚೆನ್ನೈ ಸೂಪರ್ ಕಿಂಗ್ಸ್
ಋತುರಾಜ್ ಗಾಯಕ್ವಾಡ್, ಮಥೀಶ ಪತಿರಾಣ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ, ನೂರ್ ಅಹ್ಮದ್, ಆರ್. ಅಶ್ವಿನ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ರಾಹುಲ್ ತ್ರಿಪಾಠಿ, ಖಲೀಲ್ ಅಹ್ಮದ್, ವಿಜಯ್ ಶಂಕರ್, ಸ್ಯಾಮ್ ಕರನ್, ಅಂಶುಲ್ ಕಂಬೋಜ್, ಶೇಕ್ ರಶೀದ್, ಮುಕೇಶ್ ಚೌಧರಿ, ದೀಪಕ್ ಹೂಡಾ, ಗುರುಜಪ್ನೀತ್ ಸಿಂಗ್ ,ನಾಥನ್ ಎಲ್ಲಿಸ್, ಜೇಮಿ ಓವರ್ಟನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್, ಶ್ರೇಯಸ್ ಗೋಪಾಲ್, ವಂಶ್ ಬೇಡಿ, ಆಂಡ್ರೆ ಸಿದ್ಧಾರ್ಥ್.