ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಎಂಎಸ್ ಧೋನಿಯೇ ಮುಂದಿನ ಆವೃತ್ತಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಸಿಎಸ್ಕೆ ಸಿಇಒ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಕಾಸಿ ವಿಶ್ವನಾಥನ್ ಸಿಎಸ್ಕೆ ಫ್ರಾಂಚೈಸಿಯ ನಿರ್ಧಾರವನ್ನು ತಿಳಿಸಿದ್ದಾರೆ. “ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಯಿಲ್ಲ. ನಾಯಕತ್ವದಲ್ಲಿ ಬದಲಾವಣೆಯಾಗಲಿದೆ ಎಂಬುದನ್ನು ಯಾವತ್ತೂ ಹೇಳಿಲ್ಲ. ಎಂಎಸ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ ಐಪಿಎಲ್ ಚಾಂಪಿಯನ್ ಎನಿಸಿಕೊಂಡಿದ್ದು 2021ರಲ್ಲಿ ಕೊನೆಯ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.
ಕಳೆದ ಆವೃತ್ತಿಯಲ್ಲಿ ನೀಡಿದ ಕಳಪೆ ಪ್ರದರ್ಶನದಿಂದಾಗಿ ಸಿಎಸ್ಕೆ ಭಾರೀ ಮುಖಭಂಗಕ್ಕೊಳಗಾಗಿತ್ತು. ಆದರೆ ಮುಂದಿನ ಆವೃತ್ತಿಯಲ್ಲಿ ಸಿಎಸ್ಕೆ ತಂಡ ಮತ್ತೆ ತಿರುಗೇಟು ನೀಡುವ ವಿಶ್ವಾಸದಲ್ಲಿದ್ದು ಯಾವ ರೀತಿಯಾಗಿ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಎಂಎಸ್ ಧೋನಿಯೇ ನಾಯಕನಾಗಿ ಮುಂದುವರಿಯಲಿರುವ ಕಾರಣ ತಂಡ ಮತ್ತೆ ಹೊಸತನ ದೊಂದಿಗೆ ಕಣಕ್ಕಿಳಿಯುವ ವಿಶ್ವಾಸದಲ್ಲಿದೆ.
ಸಿಎಸ್ಕೆ ನಾಯಕನಾಗಿ ವೈಫಲ್ಯವನ್ನು ಅನುಭವಿಸಿದ್ದ ರವೀಂದ್ರ ಜಡೇಜಾ ನಂತರ ತಂಡದ ನಾಯಕತ್ವವನ್ನು ಎಂಎಸ್ ಧೋನಿಗೆ ಮರಳಿಸಿದ್ದರು. ಸದ್ಯದ ಮಾಹಿತಿಯ ಪ್ರಕಾರ ಜಡೇಜಾ ಮುಂದಿನ ಆವೃತ್ತಿಗೆ ಮುನ್ನ ನಡೆಯುವ ಹರಾಜು ಪ್ರಕ್ರಿಯೆ ಯಲ್ಲಿ ರವೀಂದ್ರ ಜಡೇಜಾ ಭಾಗಿಯಾಗುವುದು ನಿಶ್ಚಿತ ಎನ್ನಲಾಗಿದೆ.