Saturday, 14th December 2024

ಮುಂಬೈಗೆ ಇಂದು ಕೋಲ್ಕತಾ ಎದುರಾಳಿ

ಅಬುಧಾಬಿ: ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಶುಕ್ರವಾರ ಮತ್ತೊಮ್ಮೆ ಮುಖಾಮುಖಿ ಯಾಗುತ್ತಿದೆ.

ಅಬುಧಾಬಿಯ ಶೇಕ್ ಝಾಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿ ಯಾಗಿದ್ದ ಸಂದರ್ಭ ಮುಂಬೈ ತಂಡ ಕೆಕೆಆರ್ ತಂಡವನ್ನು ಭರ್ಜರಿಯಾಗಿ ಸೋಲಿಸುವಲ್ಲಿ ಯಶಸ್ವಿಯಾಗಿತ್ತು.

ಟೂರ್ನಿಯ ಆರಂಭಿಕ ಹಂತದಲ್ಲಿ ಮುಂಬೈ ಹಾಗೂ ಕೆಕೆಆರ್ ಎದುರಾಳಿಗಳಾಗಿ ಕಣಕ್ಕಿಳಿದಿದ್ದ ಸಂದರ್ಭದಲ್ಲಿ ಮುಂಬೈ ಕೋಲ್ಕತಾ ತಂಡವನ್ನು 49 ರನ್‌ಗಳ ಅಂತರದಿಂದ ಮಣಿಸಿತ್ತು.  ಐದರಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಮುಂಬೈ ಉತ್ತಮ ಫಾರ್ಮ್‌ನಲ್ಲಿದೆ. ಕೊಲ್ಕತಾ ತಂಡ ಕಳೆದ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿದ್ದು ಎರಡರಲ್ಲಿ ಸೋಲು ಕಂಡಿದೆ.

ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಎರಡನೇ ಸ್ಥಾನವನ್ನು ಹೊಂದಿದೆ. ಕೋಲ್ಕತಾ ನೈಟ್ ರೈಡರ್ಸ್ ನಾಲ್ಕನೇ ಸ್ಥಾನವನ್ನು ಆಕ್ರಮಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.