Saturday, 10th June 2023

ಮುಶ್ಫಿಕರ್ ರಹೀಮ್ ಟಿ20 ಕ್ರಿಕೆಟ್‌ಗೆ ವಿದಾಯ

ಢಾಕಾ: ಬಾಂಗ್ಲಾದೇಶ ತಂಡದ ಅನುಭವಿ ಆಟಗಾರ ಮುಶ್ಫಿಕರ್ ರಹೀಮ್ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಷ್ಯಾ ಕಪ್‌ನಲ್ಲಿ ಬಾಂಗ್ಲಾದೇಶ ತಂಡ ಲೀಗ್ ಹಂತದಿಂದ ಹೊರಬಿದ್ದಿದೆ.

ಭಾನುವಾರ ತಮ್ಮ ನಿವೃತ್ತಿಯ ಘೋಷಣೆ ಮಾಡಿದ್ದು ಟೆಸ್ಟ್ ಹಾಗೂ ಏಕದಿನ ಮಾದರಿಯಲ್ಲಿ ಹೆಚ್ಚಿನ ಗಮನ ಹರಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಪ್ರಕಟಿಸಿದ್ದಾರೆ.

35ರ ಹರೆಯದ ಅನುಭವಿ ಆಟಗಾರ ಏಷ್ಯಾಕಪ್‌ನಲ್ಲಿ ನೀಡಿದ ಪ್ರದರ್ಶನ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದ ಮುಷ್ಫಿಕರ್ ರಹೀಮ್ ವಿಕೆಟ್ ಕೀಪರ್ ಆಗಿಯೂ ಕಳಪೆ ಪ್ರದರ್ಶನ ನೀಡುವ ಮೂಲಕ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಅನೇಕ ಅವಕಾಶಗಳನ್ನು ಕೈಚೆಲ್ಲುವ ಮೂಲಕ ತಂಡದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಶ್ರೀಲಂಕಾ ವಿರುದ್ಧ ಮಹತ್ವದ ಪಂದ್ಯದಲ್ಲಿ ರಹೀಮ್ ಮಾಡಿದ ಕೆಲ ಎಡವಟ್ಟುಗಳು ತಂಡದ ಸೋಲಿಗೆ ಕಾರಣವಾಗಿತ್ತು ಎಂದು ವಿಶ್ಲೇಷಣೆಗಳು ನಡೆದಿತ್ತು.

ಬಾಂಗ್ಲಾದೇಶದ ಅನುಭವಿ ಆಟಗಾರ ಮುಷ್ಫಿಕರ್ ರಹೀಮ್ 102 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ತಮ್ಮ 17 ವರ್ಷಗಳ ಸುದೀರ್ಘ ಟಿ20ಐ ವೃತ್ತಿ ಜೀವನದಲ್ಲಿ 1500 ರನ್‌ಗಳನ್ನು ಗಳಿಸಿದ್ದು 19.48ರ ಸರಾಸರಿ ಹೊಂದಿದ್ದಾರೆ. ಅವರ ಸ್ಟ್ರೈಕ್‌ರೇಟ್ 115.03 ಆಗಿದೆ. ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ ಮಾದರಿಯಲ್ಲಿ 50 ಸಿಕ್ಸರ್ ಬಾರಿಸಿದ್ದಾರೆ.

error: Content is protected !!