ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Navjot Sidhu: 2027ರ ವಿಶ್ವಕಪ್ ಗೆಲ್ಲಬೇಕಿದ್ದರೆ ಗಂಭೀರ್-ಅಗರ್ಕರ್ ಕಿತ್ತೊಗೆಯಬೇಕು; ವೈರಲ್‌ ಪೋಸ್ಟ್‌ ಬಗ್ಗೆ ನವಜೋತ್ ಸಿಧು ಸ್ಪಷನೆ

"ಭಾರತ 2027 ರ ಏಕದಿನ ವಿಶ್ವಕಪ್ ಗೆಲ್ಲಲು ಬಯಸಿದರೆ, ಬಿಸಿಸಿಐ ಅಜಿತ್ ಅಗರ್ಕರ್ ಮತ್ತು ಗೌತಮ್ ಗಂಭೀರ್ ಅವರನ್ನು ಆದಷ್ಟು ಬೇಗ ವಜಾಗೊಳಿಸಿ, ಪೂರ್ಣ ಗೌರವದೊಂದಿಗೆ ಮತ್ತೆ ರೋಹಿತ್ ಶರ್ಮಾ ಅವರಿಗೆ ನಾಯಕತ್ವವನ್ನು ಹಸ್ತಾಂತರಿಸಬೇಕು" ಎಂದು ಸಿಧು ಹೆಸರಿನಲ್ಲಿ ಮಾಡಿದ ಪೋಸ್ಟ್‌ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಸಿಧು ಸ್ಪಷ್ಟೀಕರಣವನ್ನು ನೀಡಿದ್ದಾರೆ.

ಮುಂಬಯಿ: 2027 ರ ಏಕದಿನ ವಿಶ್ವಕಪ್‌ಗಾಗಿ ಭಾರತದ ಯೋಜನೆಗಳ ಕುರಿತು ತಮ್ಮ ಹೆಸರಿನ ನಕಲಿ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆದ ನಂತರ ಭಾರತದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಸ್ಪಷ್ಟೀಕರಣವನ್ನು ನೀಡಿದ್ದಾರೆ.

"ಭಾರತ 2027 ರ ಏಕದಿನ ವಿಶ್ವಕಪ್ ಗೆಲ್ಲಲು ಬಯಸಿದರೆ, ಬಿಸಿಸಿಐ ಅಜಿತ್ ಅಗರ್ಕರ್ ಮತ್ತು ಗೌತಮ್ ಗಂಭೀರ್ ಅವರನ್ನು ಆದಷ್ಟು ಬೇಗ ವಜಾಗೊಳಿಸಿ, ಪೂರ್ಣ ಗೌರವದೊಂದಿಗೆ ಮತ್ತೆ ರೋಹಿತ್ ಶರ್ಮಾ ಅವರಿಗೆ ನಾಯಕತ್ವವನ್ನು ಹಸ್ತಾಂತರಿಸಬೇಕು" ಎಂದು ಸಿಧು ಹೇಳಿದ್ದಾಗಿ ಸುದ್ದಿಯೊಂದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಸಿಧು ಈ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ್ದಾರೆ.

ಈ ಹೇಳಿಕೆಯನ್ನು ತಳ್ಳಿಹಾಕಿದ ಸಿಧು, ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಹರಿಹಾಯ್ದರು. ಮತ್ತು ತನ್ನ ಅಧಿಕೃತ ಟ್ವಿಟರ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ "ಎಂದಿಗೂ ಅದನ್ನು ಹೇಳಿಲ್ಲ, ನಕಲಿ ಸುದ್ದಿಗಳನ್ನು ಹರಡಬೇಡಿ, ಅದನ್ನು ಎಂದಿಗೂ ಊಹಿಸಿರಲಿಲ್ಲ. ನಿಮಗೆ ನಾಚಿಕೆಯಾಗಬೇಕು" ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ Rohit-Virat ODI Future: ಕೊಹ್ಲಿ, ರೋಹಿತ್‌ ಏಕದಿನ ಭವಿಷ್ಯದ ಬಗ್ಗೆ ಆತುರದ ನಿರ್ಧಾರವಿಲ್ಲ; ಬಿಸಿಸಿಐ

ಐಕಾನಿಕ್‌ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಏಕದಿನ ಭವಿಷ್ಯದ ಬಗ್ಗೆ ಬಿಸಿಸಿಐ ಯಾವುದೇ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಲು ಆತುರಪಡುತ್ತಿಲ್ಲ. 2027 ರಲ್ಲಿ ಮುಂದಿನ ಏಕದಿನ ವಿಶ್ವಕಪ್ ಬರುವ ಹೊತ್ತಿಗೆ ಕೊಹ್ಲಿ ಮತ್ತು ರೋಹಿತ್ ಅವರಿಗೆ ಕ್ರಮವಾಗಿ 39 ಮತ್ತು 40 ವರ್ಷ ವಯಸ್ಸಾಗಲಿದೆ. ಆದರೆ ಮಂಡಳಿಯು ಕಾದು ನೋಡುವ ವಿಧಾನವನ್ನು ತೆಗೆದುಕೊಳ್ಳುತ್ತಿದೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.