ರಾಯ್‌ಪುರ್: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್(Navjot Singh Sidhu) ಸಿಧುಗೆ ಮತ್ತೆ ಸಂಕಷ್ಟವೊಂದು ಎದುರಾಗಿದೆ. ಯಾವುದೇ ಅಲೋಪತಿ ಔಷಧಗಳಿಲ್ಲದೆ 4ನೇ ಹಂತದ ಕ್ಯಾನ್ಸರ್‌ನಿಂದ ತಮ್ಮ ಪತ್ನಿ ಅದ್ಭುತವಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಅವರ ಪತ್ನಿಗೆ ಛತ್ತೀಸ್‌ಗಢ ಸಿವಿಲ್ ಸೊಸೈಟಿ ನೋಟಿಸ್ ನೀಡಿದೆ.
ಕೆಲ ದಿನಗಳ ಹಿಂದೆ ನವಜೋತ್ ಸಿಂಗ್ ಅವರು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡುವ ವೇಳೆ, ಪತ್ನಿ ನವಜೋತ್ ಕೌರ್ ನಾಲ್ಕನೇ ಹಂತದ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ. ಇದಕ್ಕೆ ಕಾರಣ ಹಾಲು ಮತ್ತು ಸಕ್ಕರೆ ಪದಾರ್ಥಗಳಿಂದ ದೂರವಿದ್ದದು. ನಿಂಬೆ ರಸ, ಹಸಿರೆಲೆ, ಅರಿಶಿನ, ಬೇವು ಹಾಗೂ ತುಳಸಿ ಮುಂತಾದ ಪದಾರ್ಥಗಳನ್ನು ಬಳಸಿ ಕೇವಲ 40 ದಿನಗಳಲ್ಲಿ ಕ್ಯಾನ್ಸರ್ ಸೋಲಿಸಿದಳು ಎಂದು ಹೇಳಿದ್ದರು. ನವಜೋತ್ ಸಿಂಗ್ ಈ ಹೇಳಿಕೆ ಭಾರೀ ವೈರಲ್ ಆಗಿತ್ತು.
ʼನನ್ನ ಪತ್ನಿ ಸ್ಟೇಜ್ 4 ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದು ಬಹಳ ಪರೂಪದ ಮೆಟಾಸ್ಟಾಸಿಸ್ ಎನ್ನಲಾಗಿತ್ತು. ಇದರಿಂದ ಆಕೆಯನ್ನು ಗುಣಮುಖ ಮಾಡಲು ಸ್ತನ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಪಟಿಯಾಲಾದ ರಾಜೀಂದ್ರ ಆಸ್ಪತ್ರೆ ಮತ್ತು ಯಮುನಾನಗರದ ಡಾ.ವರ್ಯಂ ಸಿಂಗ್ ಆಸ್ಪತ್ರೆಯಲ್ಲಿ ಸುದೀರ್ಘ ಚಿಕಿತ್ಸೆ ಪಡೆದಿದ್ದರು. ಬದುಕುಳಿಯುವ ಸಾಧ್ಯತೆ ಶೇ.3ರಷ್ಟು ಮಾತ್ರ ಇತ್ತು. ಆದರೆ ನನ್ನ ಪತ್ನಿ ಸಾವನ್ನು ಗೆದ್ದು ಬಂದಿರುವುದು ಆಕೆ ಸೇವಿಸಿದ ಕಟ್ಟುನಿಟ್ಟಿನ ಆಹಾರ ಕ್ರಮʼ ಎಂದು ಹೇಳಿದ್ದರು.
ಇದನ್ನೂ ಓದಿ IND vs AUS: ಪಿಂಕ್ ಬಾಲ್ ಅಭ್ಯಾಸ ಪಂದ್ಯಕ್ಕೂ ಮುನ್ನ ಉಭಯ ತಂಡಗಳಿಗೆ ಮಳೆ ಭೀತಿ!
ಇದೀಗ ಛತ್ತೀಸ್‌ಗಢ ಸಿವಿಲ್ ಸೊಸೈಟಿ ನೋಟಿಸ್ ಜಾರಿ ಮಾಡಿದ್ದು, ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ವಾರದೊಳಗೆ ಸಲ್ಲಿಸುವಂತೆ ಸಿಧು ಅವರ ಪತ್ನಿ ನವಜೋತ್ ಕೌರ್ಗೆ ಸೂಚಿಸಿದೆ. ಇಲ್ಲವಾದಲ್ಲಿ 850 ಕೋಟಿ ರೂ. ಪರಿಹಾರ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ಟಾಟಾ ಮೆಮೋರಿಯಲ್ ಆಸ್ಪತ್ರೆ ಕೂಡ ಸಿಧು ಹೇಳಿಕೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಎಂದು ಘೋಷಿಸಿದೆ. ಶಸ್ತ್ರಚಿಕಿತ್ಸೆ, ವಿಕಿರಣ ಚಿಕಿತ್ಸೆ ಮತ್ತು ಕೀಮೋಥೆರಪಿಯಂತಹ ಸಾಬೀತಾದ ಚಿಕಿತ್ಸೆಗಳಿಂದ ಮಾತ್ರ ಕ್ಯಾನ್ಸರ್ ಅನ್ನು ಗುಣಪಡಿಸಬಹುದು ಎಂದು ವೈದ್ಯರು ಹೇಳಿದ್ದಾರೆ.
1988ರಲ್ಲಿ ನಡೆದಿದ್ದ ರಸ್ತೆ ಜಗಳ (Road Rage Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ನವಜೋತ್ ಸಿಂಗ್ ಸಿಧು ಅವರಿಗೆ 2022ರ ಮೇ 22ರಂದು 1988ರ ಡಿಸೆಂಬರ್‌ನಲ್ಲಿ ಪಟಿಯಾಲಾದ ಪಾರ್ಕಿಂಗ್ ಸ್ಥಳವೊಂದರಲ್ಲಿ ನವಜೋತ್ ಸಿಂಗ್ ಸಿಧು ಮತ್ತು ಅವರ ಸಹಚರ ರೂಪಿಂದರ್ ಸಿಂಗ್ ಸಂಧು ಸೇರಿ, ಹಿರಿಯ ನಾಗರಿಕ ಗುರ್ನಾಮ್ ಸಿಂಗ್‌ರಿಗೆ ಬೈದಿದ್ದಲ್ಲದೆ, ಅವರನ್ನು ಕಾರಿನಿಂದ ಕೆಳಗೆ ಇಳಿದು ತಲೆಗೆ ಹೊಡೆದಿದ್ದರು. ಅದಾದ ಕೆಲವು ದಿನಗಳಲ್ಲಿ ಗುರ್ನಾಮ್ ಸಿಂಗ್ ಮೃತಪಟ್ಟಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್‌ತನಕ ಹೋಗಿತ್ತು.