ಟೋಕಿಯೊ: ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಈ ಮೂಲಕ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ.
ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದರೆ, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.
ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು. ಇದರೋಂದಿಗೆ ಭಾರತವು ಟೋಕಿಯೊದಲ್ಲಿ ಏಳು ಪದಕಗಳನ್ನುಗೆದ್ದಿದ್ದು, ಲಂಡನ್ ಒಲಿಂಪಿಕ್ಸ್‌ನಲ್ಲಿ 6 ಪದಕಗಳ ದಾಖಲೆಯನ್ನು ಮುರಿದಿದೆ.