ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2030ರ ಕಾಮನ್‌ವೆಲ್ತ್ ಗೇಮ್ಸ್‌ ಆತಿಥ್ಯ ಸ್ವೀಕರಿಸಿದ ಭಾರತ

Ahmedabad CWG: ಭಾರತದ ಪ್ರಾಚೀನ ತತ್ವಶಾಸ್ತ್ರ, ವೈವಿಧ್ಯಮಯ ಕಲೆ ಮತ್ತು ಸಾಂಸ್ಕೃತಿಕ ವೈಭವವನ್ನು ಪರಿಚಯಿಸುವ ಮೂಲಕ, 2030ರ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಭಾರತವು ಜಗತ್ತಿಗೆ ಭಾವಪೂರ್ಣ ಆಹ್ವಾನವನ್ನು ನೀಡಿತು. ಭಾರತೀಯ ಸಂಪ್ರದಾಯ, ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ರೂಪಕ ಮತ್ತು ಸಂಗೀತ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೊರೆಗೊಂಡವು.

Neeraj and PT Usha

ನವದೆಹಲಿ, ಆ.3: ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಬಿದ್ದಿದೆ. ಈ ಸಮಾರಂಭದಲ್ಲಿ 2030ರಲ್ಲಿ ಆತಿಥ್ಯ ವಹಿಸಲಿರುವ ಭಾರತದ ಅಹಮದಾಬಾದ್ ನಗರಕ್ಕೆ ಕಾಮನ್‌ವೆಲ್ತ್ ಕ್ರೀಡಾಕೂಟದ ಧ್ವಜ ಹಾಗೂ ದಂಡ (ಬ್ಯಾಟನ್‌) ಅಧಿಕೃತವಾಗಿ ಹಸ್ತಾಂತರ ಮಾಡಲಾಯಿತು. ಈ ವೇಳೆ ಒಲಿಂಪಿಕ್‌ ಅವಳಿ ಪದಕ ವಿಜೇತ ನೀರಜ್‌ ಚೋಪ್ರಾ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಪಿಟಿ ಉಷಾ ಮತ್ತು ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತು ರಾಷ್ಟ್ರಗಳ ನಿಜವಾದ ಆಚರಣೆಯಾಗಿ, ಸಮಾರೋಪ ಸಮಾರಂಭವು ಆರಂಭದಲ್ಲಿ ಸ್ಕಾಟ್ಲೆಂಡ್‌ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಆಚರಿಸಿತು.

ಭಾರತದ ಪ್ರಾಚೀನ ತತ್ವಶಾಸ್ತ್ರ, ವೈವಿಧ್ಯಮಯ ಕಲೆ ಮತ್ತು ಸಾಂಸ್ಕೃತಿಕ ವೈಭವವನ್ನು ಪರಿಚಯಿಸುವ ಮೂಲಕ, 2030ರ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಭಾರತವು ಜಗತ್ತಿಗೆ ಭಾವಪೂರ್ಣ ಆಹ್ವಾನವನ್ನು ನೀಡಿತು. ಭಾರತೀಯ ಸಂಪ್ರದಾಯ, ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ರೂಪಕ ಮತ್ತು ಸಂಗೀತ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೊರೆಗೊಂಡವು.



ಸಮಾರೋಪ ಸಮಾರಂಭದಲ್ಲಿ ಮಹಿಳೆಯರ 57 ಕೆ.ಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಜೈಸ್ಮಿನ್ ಲಂಬೋರಿಯಾ ಭಾರತದ ತ್ರಿವರ್ಣ ಧ್ವಜಧಾರಿಯಾಗಿದ್ದರು.

ಭಾರತದ ನೂತನ ಫೀಲ್ಡಿಂಗ್‌ ಕೋಚ್‌ ಆಗಿ ಶುಭದೀಪ್ ಘೋಷ್ ನೇಮಕ

4ನೇ ಸ್ಥಾನ ಪಡೆದ ಭಾರತ

ಈ ಬಾರಿ ಭಾರತ 13 ಚಿನ್ನ 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳೊಂದಿಗೆ ಒಟ್ಟು 39 ಪದಕಗಳನ್ನು ಗೆದ್ದು ನಾಲ್ಕನೇ ಸ್ಥಾನದೊಂದಿಗೆ ಅಭಿಯಾನವನ್ನು ಕೊನೆಗೊಳಿಸಿತು. ಈ ಪೈಕಿ ಅಥ್ಲೆಟಿಕ್ಸ್‌ನಲ್ಲಿ16 ಹಾಗೂ ಬಾಕ್ಸಿಂಗ್‌ನಲ್ಲಿ 10 ಪದಕಗ ಜಯಿಸಿತು. 24ನೇ ಆವೃತ್ತಿಯು ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಕ್ರೀಡಾಕೂಟಕ್ಕೆ 100 ವರ್ಷಗಳ ಸಂಭ್ರಮಾಚರಣೆಯಾಗಿರಲಿದೆ.