Saturday, 14th December 2024

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ನ್ಯೂಜಿಲ್ಯಾಂಡ್ ತಂಡ ಪ್ರಕಟ

ಸೌತಾಂಪ್ಟನ್: ಜೂನ್ 18 ರಿಂದ ಆರಂಭವಾಗುವ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ15 ಸದಸ್ಯರನ್ನು ಒಳಗೊಂಡ ನ್ಯೂಜಿಲ್ಯಾಂಡ್ ತಂಡವನ್ನು ಪ್ರಕಟಿಸಲಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲು ಲಭ್ಯವಾಗಲಿದ್ದಾರೆ ಎಂದು ಮುಖ್ಯ ಕೋಚ್ ಗ್ಯಾರಿ ಸ್ಟೀಡ್ ಮಂಗಳವಾರ ಪ್ರಕಟಿಸಿದರು. ಮೊಣಕೈ ಗಾಯದಿಂದಾಗಿ ವಿಲಿಯಮ್ಸನ್ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಬೇಕಾಯಿತು. ಟಾಮ್ ಲಥಾಮ್ ನ್ಯೂಝಿಲ್ಯಾಂಡ್ ಅನ್ನು ಎಂಟು ವಿಕೆಟ್ ಗಳ ಗೆಲುವಿನತ್ತ ಕೊಂಡೊಯ್ದರು.

ಬೆನ್ನಿನ ಗಾಯದಿಂದಾಗಿ ಎರಡನೇ ಟೆಸ್ಟ್ ತಪ್ಪಿಸಿಕೊಂಡಿದ್ದ ವಿಕೆಟ್ ಕೀಪರ್ ಬಿ.ಜೆ.ವಾಟ್ಲಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡ ಹೀಗಿದೆ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲಥಾಮ್, ಹೆನ್ರಿ ನಿಕೋಲ್ಸ್, ಅಜಾಝ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್ ಬಿ.ಜೆ. ವಾಟ್ಲಿಂಗ್ ಹಾಗೂ ವಿಲ್ ಯಂಗ್.