Saturday, 7th September 2024

ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

ವೆಲ್ಲಿಂಗ್ಟನ್‌: ಪ್ರವಾಸಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯ ದಲ್ಲಿ ನ್ಯೂಜಿಲೆಂಡ್ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡದ ಪರ ಕೋನ್ವೆ 110 ಎಸೆತಗಳಲ್ಲಿ 126 ರನ್ ಗಳಿಸಿದರೆ, ಡ್ಯಾರಿಲ್ ಮಿಚೆಲ್ 100 ರನ್ ಬಾರಿಸುವ ಮೂಲಕ ಅಜೇಯರಾಗಿ ಉಳಿದರು.  ಒಟ್ಟಾರೆ, ನ್ಯೂಜಿಲೆಂಡ್ ತಂಡ 6ವಿಕೆಟ್ ನಷ್ಟಕ್ಕೆ 318 ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡಕ್ಕೆ ಮಹಮದುಲ್ಲ ಅವರ 76ರನ್ ಗೆಲುವನ್ನು ತಂದುಕೊಡಲಾಗಲಿಲ್ಲ. ಕೊನೆಯವರೆಗೂ ಏಕಾಂಗಿಯಾಗಿ ಹೋರಾಡಿದರು. ಬಾಂಗ್ಲಾದೇಶ ತಂಡ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 154ರನ್ ಗಳಿಸುವ ಮೂಲಕ ಅಂತಿಮ ಪಂದ್ಯದಲ್ಲೂ ಸೋಲನುಭವಿಸಿದೆ. ನ್ಯೂಜಲೆಂಡ್‌ ತಂಡದ ಡೆವೋನ್‌ ಕಾನ್ವೆ ಪಂದ್ಯಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!