Sunday, 8th September 2024

ಬಾಂಗ್ಲಾದೇಶ ಚೇತರಿಕೆ: ರಹೀಮ್ ಅರ್ಧಶತಕ, ಶಕೀಬ್‌ ಔಟ್

ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಶುಕ್ರವಾರ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.

​​ಟಾಸ್​ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್​​ ಆಯ್ಕೆ ಮಾಡಿಕೊಂಡ ರು. ಎದುರಾಳಿ ನಾಯಕ ಶಾಕಿಬ್ ಅಲ್ ಹಸನ್ ಮುಂದಾಳತ್ವದ ಬಾಂಗ್ಲಾ ತಂಡ ಬ್ಯಾಟಿಂಗ್​ಗೆ ಮುಂದಾಗಿದೆ.

ಇತ್ತೀಚಿನ ವರದಿ ಪ್ರಕಾರ, ಬಾಂಗ್ಲಾದೇಶ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತ್ತು. ಕೀಪರ್‌ ರಹೀ‌ಮ್ ಅರ್ಧಶತಕ ಸಿಡಿಸಿದರು. ನಾಯಕ ಶಕೀಬ್ ಅಲ್ ಹಸನ್‌ ೪೦ ರನ್ ಬಾರಿಸಿ ವೇಗಿ ಫರ್ಗ್ಯೂಸನ್‌ಗೆ ವಿಕೆಟ್ ಒಪ್ಪಿಸಿದರು.

ಆಡುವ 11ರ ಬಳಗ: ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್​ ಕೀಪರ್​), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್​ ಕೀಪರ್​), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್.

Leave a Reply

Your email address will not be published. Required fields are marked *

error: Content is protected !!