Friday, 13th December 2024

ಪುಕೊವಸ್ಕಿ ಅರ್ಧಶತಕ: ವಿಕೆಟ್ ಖಾತೆ ತೆರೆದ ಸೈನಿ

ಸಿಡ್ನಿ: ಪ್ರವಾಸಿ ಭಾರತ ವಿರುದ್ಧ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ವಿಲ್ ಪುಕೊವಸ್ಕಿ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ಆತಿಥೇಯ ಆಸ್ಟ್ರೇಲಿಯಾ ತಂಡವು ಟೀ ವಿರಾಮದ ನಂತರ 124 ರನ್ನಿಗೆ ಎರಡು ವಿಕೆಟ್‌ ಕಳೆದುಕೊಂಡು ಆಡುತ್ತಿತ್ತು.

ಪದೇ ಪದೇ ಸುರಿಯುತ್ತಿರುವ ಮಳೆಯು ಪಂದ್ಯಕ್ಕೆ ಅಡಚಣೆಯಾಗಿತ್ತು. ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೇನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು.

ಗಾಯದಿಂದ ಚೇತರಿಸಿಕೊಂಡಿರುವ ಡೇವಿಡ್ ವಾರ್ನರ್ ಕಮ್‌ಬ್ಯಾಕ್ ಮಾಡಿದ್ದರು. ಅವರನ್ನು ಹೊರದಬ್ಬಿದ ಬಲಗೈ ವೇಗಿ ಮೊಹಮ್ಮದ್ ಸಿರಾಜ್, ಎದುರಾಳಿಗಳಿಗೆ ಆರಂಭಿಕ ಆಘಾತವನ್ನು ನೀಡಿದರು. ಈ ಸಂದರ್ಭದಲ್ಲಿ ಮಳೆ ಸುರಿದ ಪರಿಣಾಮ ಪಂದ್ಯಕ್ಕೆ ಅಡಚಣೆಯಾಗಿತ್ತು. ಈ ವೇಳೆಗೆ ಆಸ್ಟ್ರೇಲಿಯಾ 7.1 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿತ್ತು.

ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಪುಕೊವಸ್ಕಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಅರ್ಧಶತಕ ಸಾಧನೆ ಮಾಡಿದರು. ಇವರಿಗೆ ಸಾಥ್ ನೀಡುತ್ತಿರುವ ಮಾರ್ನಸ್ ಲಾಬುಷೇನ್ 34 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ.

ಭಾರತ ತಂಡದಲ್ಲಿ ಯುವ ವೇಗದ ಬೌಲರ್ ನವದೀಪ್ ಸೈನಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಅತ್ತ ಉಪ ನಾಯಕ ಸ್ಥಾನಕ್ಕೆ ಬಡ್ತಿ ಪಡೆದಿರುವ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಇವರಿಗೆ ಕರ್ನಾಟಕದ ಮಯಂಕ್ ಅಗರ ವಾಲ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ.