ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam terror attack: ಉಗ್ರರ ಪೈಶಾಚಿಕ ಕೃತ್ಯಕ್ಕೆ ಟೀಮ್‌ ಇಂಡಿಯಾ ಕ್ರಿಕೆಟಿಗರ ಖಂಡನೆ

ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದು, ಈ ದುಷ್ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಉಗ್ರರ ಪೈಶಾಚಿಕ ಕೃತ್ಯಕ್ಕೆ ಟೀಮ್‌ ಇಂಡಿಯಾ ಕ್ರಿಕೆಟಿಗರ ಖಂಡನೆ

Profile Abhilash BC Apr 23, 2025 2:41 PM

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ಮಂಗಳವಾರ (ಏ.22) ನಡೆದ ಭಯೋತ್ಪಾದಕ(Pahalgam terror attack) ದಾಳಿಯನ್ನು ಖಂಡಿಸಿ ಟೀಮ್ ಇಂಡಿಯಾ ಕ್ರಿಕೆಟಿಗರಾದ ವಿರಾಟ್‌ ಕೊಹ್ಲಿ, ಸಚಿನ್‌ ತೆಂಡೂಲ್ಕರ್‌, ಗೌತಮ್‌ ಗಂಭೀರ್‌, ಕೆಲ್‌ ರಾಹುಲ್‌ ಸೇರಿ ಅನೇಕರು ತಮ್ಮ ಸಾಮಾಜಿಕ ಜಾಲತಾಣದ ಮಾಧ್ಯಮದಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ. ಜತೆಗೆ ಬಲಿಪಶುವಿನ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

'ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ. ಬಲಿಪಶುಗಳ ಕುಟುಂಬಗಳಿಗೆ ಸಂತಾಪಗಳು. ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ನೀಡಲಿ ಮತ್ತು ಈ ಕ್ರೂರ ಕೃತ್ಯಕ್ಕೆ ನ್ಯಾಯ ದೊರಕಲೆಂದು ಪ್ರಾರ್ಥಿಸುತ್ತೇನೆ' ಎಂದು ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಾಕಿದ್ದಾರೆ.



'ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಗ್ಗೆ ಕೇಳಿ ಹೃದಯ ಹೃದಯ ವಿದ್ರಾವಕವಾಗಿದೆ. ಬಲಿಪಶುಗಳು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಈ ರೀತಿಯ ಹಿಂಸಾಚಾರಕ್ಕೆ ನಮ್ಮ ದೇಶದಲ್ಲಿ ಸ್ಥಾನವಿಲ್ಲ' ಎಂದು ಶುಭಮನ್ ಗಿಲ್ ಪೋಸ್ಟ್ ಮಾಡಿದ್ದಾರೆ.



'ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ಹೃದಯ ವಿದ್ರಾವಕವಾಯಿತು. ನನ್ನ ಆಲೋಚನೆಗಳು ಬಲಿಪಶುಗಳ ಕುಟುಂಬಗಳೊಂದಿಗೆ ಇವೆ. ಶಾಂತಿ ಮತ್ತು ಶಕ್ತಿಗಾಗಿ ಪ್ರಾರ್ಥಿಸುತ್ತೇನೆ' ಎಂದು ಕೆಲ್‌ ರಾಹುಲ್ ಸಂತಾಪ ಸೂಚಿಸಿದ್ದಾರೆ.



'ಮೃತರ ಕುಟುಂಬಗಳಿಗಾಗಿ ಪ್ರಾರ್ಥಿಸುತ್ತೇನೆ. ಇದಕ್ಕೆ ಕಾರಣರಾದವರು ತಕ್ಕ ಬೆಲೆ ತೆರಬೇಕಾಗುತ್ತದೆ. ಭಾರತ ತಿರುಗೇಟು ನೀಡಲಿದೆ ಎಂದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.



'ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ದಾಳಿಯಿಂದ ತೀವ್ರ ದುಃಖವಾಗಿದೆ. ಎಲ್ಲರೂ ಭರವಸೆಯೊಂದಿಗೆ ಜತೆಗೆ ನಿಲ್ಲೋಣ' ಎಂದು ಯುವರಾಜ್ ಸಿಂಗ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Pahalgam Attack: ಪಹಲ್ಗಾಮ್ ದಾಳಿಯ ಮೃತರು ಮತ್ತು ಗಾಯಾಳುಗಳ ಪಟ್ಟಿ ಬಿಡುಗಡೆ

ಉಗ್ರರಿಗೆ ಖಡಕ್‌ ಎಚ್ಚರಿಕೆ ನೀಡಿದ ಮೋದಿ

ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದು, ಈ ದುಷ್ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ" ಎಂದು ಅವರು ಹೇಳಿದರು.

ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಅವರನ್ನು ನಾವು ಸುಮ್ಮನರ ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಅವರ ದುಷ್ಟ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.



'ಅಮಾಯಕರ ಮೇಲೆ ನಡೆದ ದಾಳಿಯಿಂದ ಆಘಾತ ಮತ್ತು ತೀವ್ರ ದುಃಖವಾಗಿದೆ. ಜೀವಹಾನಿಗೆ ನಾವು ಶೋಕಿಸುತ್ತಿದ್ದೇವೆ ಮತ್ತು ನ್ಯಾಯಕ್ಕಾಗಿ ಪ್ರಾರ್ಥಿಸುತ್ತಿದ್ದೇವೆ' ಸಚಿನ್ ತೆಂಡೂಲ್ಕರ್ ಟ್ವೀಟ್‌ ಮಾಡಿದ್ದಾರೆ.