ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಟೂರ್ನಿಯ ಮೊದಲ ಮುಖಾಮುಖಿಯ ವೇಳೆ 'ನೋ ಶೇಕ್‌ಹ್ಯಾಂಡ್' ವಿಚಾರ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ನಾಳೆ(ಸೆ.21) ಸೂಪರ್-4 ಹಂತದ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿ ಆಗಲಿದೆ. ‘ನೋ ಶೇಕ್‌ಹ್ಯಾಂಡ್’ ನಿಲುವನ್ನು ಈಗಾಗಲೇ ಬಲವಾಗಿ ಸಮರ್ಥಿಸಿಕೊಳ್ಳುತ್ತಿರುವ ಭಾರತ ತಂಡ, ಸೂಪರ್-4 ಹಾಗೂ ಫೈನಲ್‌ನಲ್ಲೂ ಪಾಕಿಸ್ತಾನ ಆಟಗಾರರ ಕೈ ಕುಲುಕುವ ಸಾಧ್ಯತೆ ಇಲ್ಲ. ಇದರ ಮಧ್ಯೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನೋ ಶೇಕ್‌ಹ್ಯಾಂಡ್‌ಗೆ ಒಪ್ಪಿದೆ ಎನ್ನಲಾಗಿದೆ.
ಈಗಾಗಲೇ ಪಾಕ್‌ಗೆ ಐಸಿಸಿ ಎಚ್ಚರಿಕೆಯನ್ನು ಕೂಡ ನೀಡಿದೆ. ಶಿಷ್ಟಾಚಾರ ಉಲ್ಲಂಘಿಸಿದ ಕಾರಣ ತಂಡದ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಐಸಿಸಿ ಚಿಂತನೆ ನಡೆಸಿದೆ. ಇದರಿಂದ ಪಾಕ್ ಬಾಲ ಬಿಚ್ಚುವಂತಿಲ್ಲ.
ಶೇಕ್‌ಹ್ಯಾಂಡ್ ನಿಯಮದಲ್ಲಿ ಏನಿದೆ?
ಕ್ರಿಕೆಟ್ ಸೇರಿ ಯಾವುದೇ ಕ್ರೀಡೆಯಲ್ಲೂ ಆಟಗಾರರು ಪರಸ್ಪರ ಕೈಕುಲುಕುವುದು, ಅಭಿನಂದನೆ ಸಲ್ಲಿಸುವುದು ವಾಡಿಕೆ. ಆದರೆ ಇದು ಕ್ರೀಡಾಸ್ಫೂರ್ತಿಯ ಭಾಗ ಮಾತ್ರವಾಗಿದ್ದು, ಕಡ್ಡಾಯವೇನಲ್ಲ. ತಜ್ಞರ ಪ್ರಕಾರ, ಹ್ಯಾಂಡ್‌ಶೇಕ್ ನಿರಾಕರಿಸುವುದು ತಾಂತ್ರಿಕವಾಗಿ ನಿಯಮ ಉಲ್ಲಂಘನೆ ಎಂದು ಪರಿಗಣಿಸಬಹುದಾದರೂ, ಅಂತಹ ಉಲ್ಲಂಘನೆಗಳಿಗೆ ದಂಡಗಳು ಹೇರುವ ಕ್ರಮವಿಲ್ಲ. ಯಾವುದೇ ನಿಯಮ ಇಲ್ಲದಿರುವಾಗ ಭಾರತದ ಆಟಗಾರರು ಕೈಕುಲುಕದೇ ಇರುವುದು ತಪ್ಪಲ್ಲ ಎಂದಿದ್ದಾರೆ.
ಎದುರಾಳಿ ಆಟಗಾರರ ಜೊತೆ ಕೈಕುಲುಕದೇ ಇರುವುದು ಕ್ರೀಡೆಯಲ್ಲಿ ಹೊಸದೇನಲ್ಲ. ರಷ್ಯಾ ಹಾಗೂ ಬೆಲಾರಸ್ ದೇಶಗಳು ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ಕಾರಣಕ್ಕೆ 2023ರ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರು ಬೆಲಾರಸ್‌ನ ವಿಕ್ಟೋರಿಯಾ ಅಜರೆಂಕಾಗೆ ಶೇಕ್‌ಹ್ಯಾಂಡ್ ಮಾಡಿರಲಿಲ್ಲ.
ಇದನ್ನೂ ಓದಿ Asia Cup 2025: ಈ ಬಾರಿ ಪ್ರಶಸ್ತಿ ಗೆಲ್ಲುವ ತಮ್ಮ ನೆಚ್ಚಿನ ತಂಡವನ್ನು ಆರಿಸಿದ ಜೋನಾಥನ್ ಟ್ರಾಟ್!