Asif Afridi: ನಿಷೇಧ ಮುಗಿಸಿ 38 ವರ್ಷದಲ್ಲಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಾಕ್ ಸ್ಪಿನ್ನರ್
ಅಫ್ರಿದಿ ಅವರು 2009 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು ಮತ್ತು 57 ಪಂದ್ಯಗಳಲ್ಲಿ 198 ವಿಕೆಟ್‌ಗಳನ್ನು ಪಡೆದಿದ್ದಾರೆ. 60 ಲಿಸ್ಟ್ ಎ ಪಂದ್ಯಗಳಲ್ಲಿ 83 ವಿಕೆಟ್‌ಗಳನ್ನು ಮತ್ತು 85 ಟಿ 20 ಗಳಲ್ಲಿ 78 ವಿಕೆಟ್‌ಗಳನ್ನು ಪಡೆದಿದ್ದಾರೆ.

-

ರಾವಲ್ಪಿಂಡಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿಷೇಧಕ್ಕೊಳಗಾಗಿದ್ದ ಸ್ಪಿನ್ನರ್ ಆಸಿಫ್ ಅಫ್ರಿದಿಗೆ 38 ವರ್ಷದಲ್ಲಿ ಕ್ರಿಕೆಟ್ ಪದಾರ್ಪಣೆ ಸೌಭಾಗ್ಯ ಒದಗಿ ಬಂದಿದೆ. ರಾವಲ್ಪಿಂಡಿಯಲ್ಲಿ ಸೋಮವಾರ ಆರಂಭಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.
ಪಾಕಿಸ್ತಾನದ ದೇಶೀಯ ಕ್ರಿಕೆಟ್‌ನಲ್ಲಿ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಅಫ್ರಿದಿ ಎರಡು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದರು. ಆದರೆ, ಶಿಕ್ಷೆಯ ಅವಧಿ ಮುಗಿಯಲು ಇನ್ನೂ ಆರು ತಿಂಗಳು ಇರುವಂತೆಯೇ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಆದಾಗ್ಯೂ, ಅವರ ಮೇಲಿನ ನಿಷೇಧ ಸಡಿಲಿಸಿದ್ದೇಕೆ ಎಂಬುದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬಹಿರಂಗಪಡಿಸಿಲ್ಲ.
ಇದನ್ನೂ ಓದಿ ಮಹಿಳಾ ವಿಶ್ವಕಪ್ ಸೆಮಿ; ಒಂದು ಸ್ಥಾನಕ್ಕೆ 5 ತಂಡಗಳ ಮಧ್ಯೆ ಪೈಪೋಟಿ