Asia Cup 2025 hockey: ಏಷ್ಯಾಕಪ್‌ಗೆ ಪಾಕಿಸ್ತಾನ ಹಾಕಿ ತಂಡ ಭಾರತಕ್ಕೆ ಪ್ರಯಾಣ
ಆತಿಥೇಯ ಭಾರತ, ಪಾಕಿಸ್ತಾನ, ಜಪಾನ್, ಕೊರಿಯಾ, ಚೀನಾ, ಮಲೇಷ್ಯಾ, ಓಮನ್ ಮತ್ತು ಚೈನೀಸ್ ತೈಪೆ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದೆ. ಮುಂದಿನ ವರ್ಷ ನೆದರ್‌ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಅರ್ಹತಾ ಪಂದ್ಯಾವಳಿಗೆ ಈ ಟೂರ್ನಿ ಮಹತ್ವದ್ದಾಗಿದೆ.


ನವದೆಹಲಿ: ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯುವ ಏಷ್ಯಾ ಕಪ್ ಹಾಕಿ(Asia Cup 2025 hockey) ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡ(Pakistan hockey Team)ಕ್ಕೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಕ್ರೀಡಾ ಸಚಿವಾಲಯದ ಮೂಲಗಳು ಗುರುವಾರ ತಿಳಿಸಿವೆ. ಗೃಹ ಸಚಿವಾಲಯ (MHA), ವಿದೇಶಾಂಗ ಸಚಿವಾಲಯ (MEA) ಮತ್ತು ಕ್ರೀಡಾ ಸಚಿವಾಲಯವು ಅನುಮೋದನೆಗಳನ್ನು ನೀಡಿವೆ ಎನ್ನಲಾಗಿದೆ. ಪಂದ್ಯಾವಳಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 7 ರವರೆಗೆ ಬಿಹಾರದ ರಾಜ್‌ಗಿರ್‌ನಲ್ಲಿ ನಡೆಯಲಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಸರ್ಕಾರವು ಎಲ್ಲಾ ಪಾಕಿಸ್ತಾನಿ ಪ್ರಜೆಗಳು ದೇಶವನ್ನು ತೊರೆಯುವಂತೆ ಆದೇಶಿಸಿತ್ತು. ಮತ್ತು ಅವರ ವೀಸಾಗಳನ್ನು ರದ್ದುಗೊಳಿಸಿತ್ತು. ಹೀಗಾಗಿ ಪಾಕ್ ತಂಡಕ್ಕೆ ಭಾರತ ವೀಸಾ ನೀಡುವುದು ಅನುಮಾನ ಎನ್ನಲಾಗಿತ್ತು. ಹೀಗಾಗಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆ ಅನಿಶ್ಚಿತವಾಗಿತ್ತು. ಆದರೆ ಪಂದ್ಯಾವಳಿಯಲ್ಲಿ ಅವರ ಭಾಗವಹಿಸುವಿಕೆಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಆತಿಥೇಯ ಭಾರತ, ಪಾಕಿಸ್ತಾನ, ಜಪಾನ್, ಕೊರಿಯಾ, ಚೀನಾ, ಮಲೇಷ್ಯಾ, ಓಮನ್ ಮತ್ತು ಚೈನೀಸ್ ತೈಪೆ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದೆ. ಮುಂದಿನ ವರ್ಷ ನೆದರ್‌ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಅರ್ಹತಾ ಪಂದ್ಯಾವಳಿಗೆ ಈ ಟೂರ್ನಿ ಮಹತ್ವದ್ದಾಗಿದೆ.
ಇದನ್ನೂ ಓದಿ IND vs ENG: ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡದ ಬಗ್ಗೆ ಸೌರವ್ ಗಂಗೂಲಿ ಪ್ರಶ್ನೆ!
"ಬಹುರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತದಲ್ಲಿ ಸ್ಪರ್ಧಿಸುವ ಯಾವುದೇ ತಂಡವನ್ನು ನಾವು ವಿರೋಧಿಸುವುದಿಲ್ಲ. ಆದರೆ ದ್ವಿಪಕ್ಷೀಯ ಪಂದ್ಯಗಳು ವಿಭಿನ್ನವಾಗಿವೆ" ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾಕಪ್ ಸಮಯದಲ್ಲಿ ಮತ್ತು ಈ ವರ್ಷದ ಕೊನೆಯಲ್ಲಿ ಜೂನಿಯರ್ ವಿಶ್ವಕಪ್‌ನಲ್ಲಿ ಮತ್ತೆ ಮುಖಾಮುಖಿಯಾಗುವ ನಿರೀಕ್ಷೆಯಿದೆ. ಇದು ಭಾರತದ ಆತಿಥ್ಯದಲ್ಲೇ ನಡೆಯಲಿದೆ. ಪಾಕಿಸ್ತಾನ ಎಫ್‌ಐಎಚ್ ಪ್ರೊ ಲೀಗ್‌ಗೆ ಮರಳುವುದನ್ನು ಖಚಿತಪಡಿಸಿದರೆ, ಎರಡೂ ರಾಷ್ಟ್ರಗಳು ಅರ್ಹತೆ ಪಡೆದರೆ, ಏಷ್ಯನ್ ಕ್ರೀಡಾಕೂಟ ಮತ್ತು ವಿಶ್ವಕಪ್‌ಗೆ ಮುಂಚಿತವಾಗಿ ಎರಡೂ ತಂಡಗಳು ಹೆಚ್ಚುವರಿ ಪಂದ್ಯಗಳಲ್ಲಿ ಮುಖಾಮುಖಿಯಾಗಬಹುದು.