Champions Trophy: ಪಾಕ್ ತಂಡಕ್ಕೆ ಖಡಕ್ ಎಚ್ಚರಿಕೆ ನೀಡಿದ ಪ್ರಧಾನಿ ಶರೀಫ್!
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಅಜೇಯವಾಗಿದ್ದರೂ, ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ದಾಖಲೆ ಹೊಂದಿಲ್ಲ. ಕೊನೆಯ ಬಾರಿಗೆ ನಡೆದ 2017ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಫೈನಲ್‌ನಲ್ಲಿ ಪಾಕ್ ತಂಡ ಭಾರತವನ್ನು 180 ರನ್ನುಗಳಿಂದ ಮಣಿಸಿ ಪ್ರಶಸ್ತಿ ಎತ್ತಿತ್ತು. ಈ ಬಾರಿ ಭಾರತ ಅಂದಿನ ಸೋಲಿಗೆ ಸೇಡು ತೀರಿಸಲಿದೆಯಾ ಎಂದು ಕಾದು ನೋಡಬೇಕಿದೆ.
![ಪಾಕ್ ತಂಡಕ್ಕೆ ಖಡಕ್ ಎಚ್ಚರಿಕೆ ನೀಡಿದ ಪ್ರಧಾನಿ ಶರೀಫ್!](https://cdn-vishwavani-prod.hindverse.com/media/original_images/PM_Shehbaz_Sharif.jpg)
![Profile](https://vishwavani.news/static/img/user.png)
ಲಾಹೋರ್: ಚಾಂಪಿಯನ್ಸ್ ಟ್ರೋಫಿ(Champions Trophy) ಆರಂಭಕ್ಕೂ ಮುನ್ನವೇ ಪಾಕಿಸ್ತಾನ ತಂಡಕ್ಕೆ ಪ್ರಧಾನಿ ಪ್ರಧಾನಿ ಶೆಹಬಾಜ್ ಶರೀಫ್(Pakistan PM Shehbaz Sharif) ಸವಾಲೆಸೆದಿದ್ದಾರೆ. ತಂಡದ ಗುರಿ ಕೇವಲ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದಷ್ಟೇ ಅಲ್ಲ, ಫೆ. 23ರ ದುಬಾೖ ಪಂದ್ಯದಲ್ಲಿ ನಡೆಯುವ ಪಂದ್ಯದಲ್ಲಿ ಭಾರತವನ್ನು ಸೋಲಿಸುವುದು ಕೂಡ ಆಗಿದೆ ಎಂದು ಖಡಕ್ ಸಂದೇಶ ನೀಡಿದ್ದಾರೆ. ನವೀಕರಣಗೊಂಡ ಲಾಹೋರ್‌ನ ಗಡಾಫಿ ಸ್ಟೇಡಿಯಂನ ಉದ್ಘಾಟನಾ ಸಮಾರಂಭದಲ್ಲಿ ಶರೀಫ್ ಈ ಮಾತುಗಳನ್ನಾಡಿದರು.
ಭಾರತದೆದುರಿನ ಪಂದ್ಯದಲ್ಲಿ ಪಾಕಿಸ್ತಾನದ ಎಲ್ಲ ಆಟಗಾೃರು ತಮ್ಮ ಅತ್ಯುತ್ತಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ. 29 ವರ್ಷಗಳ ಬಳಿಕ ಐಸಿಸಿ ಕೂಟವನ್ನು ಏರ್ಪಡಿಸುತ್ತಿರುವುದು ನಮ್ಮ ಪಾಲಿನ ದೊಡ್ಡ ಸಂಭ್ರಮ. ನಮ್ಮ ಟಾಸ್ಕ್ ಕೇವಲ ಟ್ರೋಫಿ ಗೆಲ್ಲುವುದಷ್ಟೇ ಅಲ್ಲ, ಭಾರತವನ್ನೂ ಸೋಲಿಸಬೇಕಿದೆ. ಇದಕ್ಕೆ ಇಡೀ ದೇಶವೇ ತಂಡಕ್ಕೆ ಬೆಂಬಲವಾಗಿ ನಿಲ್ಲಲಿದೆ ಎಂದು ಶೆಹಬಾಜ್ ಶರೀಫ್ ಹೇಳಿದರು.
ಭಾರತಕ್ಕೆ ಸೋಲುಣಿಸಿದ್ದ ಪಾಕ್
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಅಜೇಯವಾಗಿದ್ದರೂ, ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ದಾಖಲೆ ಹೊಂದಿಲ್ಲ. ಕೊನೆಯ ಬಾರಿಗೆ ನಡೆದ 2017ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಫೈನಲ್‌ನಲ್ಲಿ ಪಾಕ್ ತಂಡ ಭಾರತವನ್ನು 180 ರನ್ನುಗಳಿಂದ ಮಣಿಸಿ ಪ್ರಶಸ್ತಿ ಎತ್ತಿತ್ತು. ಈ ಬಾರಿ ಭಾರತ ಅಂದಿನ ಸೋಲಿಗೆ ಸೇಡು ತೀರಿಸಲಿದೆಯಾ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ Champions Trophy Anthem Song: ಚಾಂಪಿಯನ್ಸ್ ಟ್ರೋಫಿಯ ಅಧಿಕೃತ ಥೀಮ್ ಸಾಂಗ್ ಬಿಡುಗಡೆ
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಫೆಬ್ರವರಿ 19ರಂದು ಹಾಲಿ ಚಾಂಪಿಯನ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಭಾರತ ಒಳಗೊಂಡ 3 ಲೀಗ್ ಪಂದ್ಯಗಳು ಮತ್ತು ಒಂದು ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಿಗದಿಯಾಗಿದೆ. ಟೂರ್ನಿಯ ಉಳಿದ 9 ಲೀಗ್ ಮತ್ತು ಇನ್ನೊಂದು ಸೆಮಿಫೈನಲ್ ಪಂದ್ಯ ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ನಲ್ಲಿ ನಿಗದಿಯಾಗಿವೆ.
2ನೇ ಸೆಮಿಫೈನಲ್ ಮಾರ್ಚ್ 2ರಂದು ಲಾಹೋರ್ನಲ್ಲಿ ನಿಗದಿಯಾಗಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್ ರಾಬಿನ್ ಲೀಗ್ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ಗೇರಲಿವೆ. ಭಾರತದ ಪಂದ್ಯಗಳು ತಟಸ್ಥ ತಾಣವಾದ ದುಬೈನಲ್ಲಿ ನಡೆಯಲಿದೆ.