ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Women's World Cup: ಮಹಿಳಾ ವಿಶ್ವಕಪ್‌ ಉದ್ಘಾಟನಾ ಸಮಾರಂಭಕ್ಕೆ ಪಾಕ್‌ ಗೈರು

ಮುಂದಿನ ಮೂರು ವರ್ಷಗಳ ಕಾಲ ಐಸಿಸಿ ಪಂದ್ಯಾವಳಿಗಳಲ್ಲಿ ಸ್ಪರ್ಧಿಸಲು ಪಾಕಿಸ್ತಾನ ಮತ್ತು ಭಾರತ ಗಡಿ ದಾಟುವುದಿಲ್ಲ. ತನ್ನ ಪಾಲಿನ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ಆಡಲಿದೆ. ಪರಿಣಾಮವಾಗಿ, ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಆಡಲಿದೆ.

ನವದೆಹಲಿ: ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ನಡೆಯಲಿರುವ ಐಸಿಸಿ ಮಹಿಳಾ ವಿಶ್ವಕಪ್(Women's World Cup 2025) ಉದ್ಘಾಟನಾ ಸಮಾರಂಭದಲ್ಲಿ ಪಾಕಿಸ್ತಾನ(Pakistan) ಭಾಗವಹಿಸುವುದಿಲ್ಲ ಎಂದು ವರದಿಯಾಗಿದೆ. ಉದ್ಘಾಟನಾ ಸಮಾರಂಭದಲ್ಲಿ(Women's World Cup opening ceremony) ಭಾರತದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ತಮ್ಮ ಸುಮಧುರ ಧ್ವನಿಯಿಂದ ಪ್ರೇಕ್ಷಕರನ್ನು ಮೋಡಿ ಮಾಡಲಿದ್ದಾರೆ. ಆದರೆ, ನಾಯಕಿ ಫಾತಿಮಾ ಸನಾ(Fatima Sana) ಅಥವಾ ಪಾಕಿಸ್ತಾನದ ಯಾವುದೇ ಪ್ರತಿನಿಧಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನ ತಂಡ ಭಾರತಕ್ಕೆ ಪ್ರವಾಸ ಬೆಳೆಸದ ಹಿನ್ನೆಲೆಯಲ್ಲಿ ತನ್ನ ಎಲ್ಲ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಇದೀಗ ಉದ್ಘಾಟನಾ ಸಮಾರಂಭದಲ್ಲೂ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಇದೇ ವರ್ಷ ಪಾಕ್‌ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಉದ್ಘಾಟನಾ ಸಮಾರಂಭದಲ್ಲಿ ಭಾರತದ ನಾಯಕ ರೋಹಿತ್‌ ಶರ್ಮ ಕೂಡ ಪಾಲ್ಗೊಂಡಿರಲಿಲ್ಲ.

ಮುಂದಿನ ಮೂರು ವರ್ಷಗಳ ಕಾಲ ಐಸಿಸಿ ಪಂದ್ಯಾವಳಿಗಳಲ್ಲಿ ಸ್ಪರ್ಧಿಸಲು ಪಾಕಿಸ್ತಾನ ಮತ್ತು ಭಾರತ ಗಡಿ ದಾಟುವುದಿಲ್ಲ. ತನ್ನ ಪಾಲಿನ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ಆಡಲಿದೆ. ಪರಿಣಾಮವಾಗಿ, ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಆಡಲಿದೆ.

ಅಕ್ಟೋಬರ್ 29 ರಂದು ಸೆಮಿಫೈನಲ್ ಮತ್ತು ನವೆಂಬರ್ 2 ರಂದು ನಡೆಯುವ ಫೈನಲ್‌ಗೆ ಪಾಕ್‌ ಮುನ್ನಡೆಯುವಲ್ಲಿ ಯಶಸ್ವಿಯಾದರೆ, ಕೊಲಂಬೊ ಎರಡೂ ಪಂದ್ಯಗಳನ್ನು ಆಯೋಜಿಸಲಿದೆ. ಪಾಕಿಸ್ತಾನ ಅಕ್ಟೋಬರ್ 2 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಪಾಕಿಸ್ತಾನ ಅರ್ಹತಾ ಪಂದ್ಯಗಳನ್ನು ಆಯೋಜಿಸಿ ಎಲ್ಲಾ ಐದು ಪಂದ್ಯಗಳನ್ನು ಗೆದ್ದು ವಿಶ್ವಕಪ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 5 ರಂದು ಮುಖಾಮುಖಿಯಾಗಲಿವೆ.

ಇದನ್ನೂ ಓದಿ Women's World Cup 2025: ಮಹಿಳಾ ಏಕದಿನ ವಿಶ್ವಕಪ್​ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ