ಕೋಲ್ಕತ್ತಾ: ಬಾಂಗ್ಲಾದೇಶ ಪಾಕಿಸ್ತಾನವನ್ನು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಎದುರಿಸಲಿದೆ.
ಬಾಂಗ್ಲಾ ಹುಲಿಗಳಿಗೆ ಈ ಪಂದ್ಯ ಔಪಚಾರಿಕ ಎಂಬಂತಾಗಿದೆ. ತಂಡ ಆಡಿರುವ 6 ಪಂದ್ಯಗಳಲ್ಲಿ 5 ಸೋತು 1 ರಲ್ಲಿ ಗೆಲುವು ಸಾಧಿಸಿದೆ. ಇದರಿಂದ ಉಳಿದ ಮೂರು ಪಂದ್ಯಗಳಲ್ಲಿ ಪಾಕಿಸ್ತಾನ, ಶ್ರೀಲಂಕಾ, ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಕಳೆದ ಶನಿವಾರ ಇದೇ ಮೈದಾನದಲ್ಲಿ ನೆದರ್ಲೆಂಡ್ಸ್ ವಿರುದ್ಧ 87 ರನ್‌ಗಳ ಆಘಾತಕಾರಿ ಸೋಲನ್ನು ಎದುರಿಸಬೇಕಾಯಿತು. 229 ರನ್‌ಗಳ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ಟೈಗರ್ಸ್ ಡಚ್ಚರ ಬೌಲಿಂಗ್ ದಾಳಿಗೆ ಸಿಲುಕಿ 42.2 ಓವರ್‌ಗಳಲ್ಲಿ 142 ರನ್‌ಗಳಿಗೆ ಆಲೌಟ್ ಆಗಿತ್ತು.
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಈವರೆಗೂ 38 ಏಕದಿನ ಪಂದ್ಯಗಳಲ್ಲಿ ಎದುರಾಗಿವೆ. ಇದರಲ್ಲಿ ಪಾಕಿಸ್ತಾನ 33 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ 5 ರಲ್ಲಿ ಜಯಿಸಿದೆ. ಬಾಂಗ್ಲಾ ಮೇಲೆ ಪೂರ್ಣ ಪ್ರಾಬಲ್ಯ ಮೆರೆದಿರುವ ಪಾಕ್ ಈ ಪಂದ್ಯದಲ್ಲಿ ಗೆದ್ದು ಸೆಮೀಸ್ ರೇಸ್ನಲ್ಲಿ ಉಳಿದುಕೊಳ್ಳಲು ಪ್ಲಾನ್ ಮಾಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಬ್ಯಾಟಿಂಗ್ ಸ್ನೇಹಿಯಾಗಿದೆ. ಸ್ಪಿನ್ನರ್‌ಗಳಿಗೂ ಇದು ನೆರವಾಗಲಿದ್ದು, ಸ್ವಲ್ಪ ತಿರುವು ನೀಡಲಿದೆ. ಕ್ರೀಡಾಂ ಗಣದ ಬೌಂಡರಿಗಳು ಚಿಕ್ಕದಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ರನ್ ಗಳಿಸಲು ಸುಲಭವಾಗಲಿದೆ.
ತಂಡ
ಪಾಕಿಸ್ತಾನ- ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಶಾದಾಬ್ ಖಾನ್, ಇಫ್ತಿಕಾರ್ ಅಹ್ಮದ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್.
ಬಾಂಗ್ಲಾದೇಶ- ತಂಝೀದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹುಸೇನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫೀಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಮೆಹದಿ ಹಸನ್ ಮಿರಾಜ್, ಮೆಹದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ.