ಹ್ಯಾಂಗ್ಝೌ: ಏಷ್ಯನ್ ಪ್ಯಾರ ಗೇಮ್ಸ್ನ ಕೊನೆಯ ದಿನ 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಗಳು ದಾಖಲೆ ಮಾಡಿದರು.
2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು ಗೆದ್ದಿದ್ದು ಇದುವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಮುರಿದಿ ರುವ ಪ್ಯಾರಾ ಅಥ್ಲೀಟ್ಗಳು ಈವರೆಗೂ ಒಟ್ಟು 108 ಪಂದ್ಯಗಳನ್ನು ಗೆದ್ದು ಮುನ್ನಗುತ್ತಿದ್ದಾರೆ.
ಈ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್ಗಳಿಗೆ ಶುಭಕೋರಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ, ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರತದ ಯುವಕರಿಗೆ ಅಸಾಧ್ಯವಾದದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿದಾಯಕ ಎಂದು ಪೋಸ್ಟ್ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.
ಜಾವೆಲಿನ್ ಸ್ಪರ್ಧೆಯಲ್ಲಿ ಭಾರತದ ಪ್ಯಾರಾ ಅಥ್ಲೀಟ್ಗಳು ಚಿನ್ನ ಮತ್ತು ಕಂಚಿನ ಪದಕ ಜಯಿಸಿದ್ದಾರೆ. ಪುರುಷರ ಎಫ್55 ಜಾವೆಲಿನ್ ಥ್ರೋ ಈವೆಂಟ್ನಲ್ಲಿ ನೀರಜ್ ಯಾದವ್ 33.69 ಮೀ ದೂರ ಭರ್ಜಿ ಎಸೆಯುವ ಮೂಲಕ ಚಿನ್ನವನ್ನು ವಶ ಪಡಿಸಿಕೊಂಡು ಕ್ರೀಡಾಕೂಟದಲ್ಲಿ ಹೊಸ ದಾಖಲೆ ಬರೆದಿದ್ದಾರೆ.