Thursday, 19th September 2024

ಪ್ಯಾಟ್ ಕಮಿನ್ಸ್ ಹೊಸ ವಿಶ್ವ ದಾಖಲೆ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ಯಾಟ್ ಕಮಿನ್ಸ್ ಅವರ ಮಾರಕ ದಾಳಿಗೆ ತತ್ತರಿಸಿತು. ಕಮಿನ್ಸ್ ಕೇವಲ 61 ರನ್ ನೀಡಿ 5 ವಿಕೆಟ್ ಕಬಳಿಸಿದರು. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಸಹ ಆಟಗಾರ ನಾಥನ್ ಲಿಯಾನ್ ಅವರ ವಿಕೆಟ್​ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಸಿಡ್ನಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ 57 ರನ್​ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಐದು ವಿಕೆಟ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಹೆಸರಿನಲ್ಲಿತ್ತು. 69 ಟೆಸ್ಟ್​ ಇನಿಂಗ್ಸ್​ಗಳ ಮೂಲಕ ಲಿಯಾನ್ ಒಟ್ಟು 162 ವಿಕೆಟ್ ಕಬಳಿಸಿ ದ್ದರು. ಈ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

ಇದೀಗ 69 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಒಟ್ಟು 163 ವಿಕೆಟ್ ಉರುಳಿಸಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನಕ್ಕೇರಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ರವಿಚಂದ್ರನ್ ಅಶ್ವಿನ್ ಹೆಸರಿನಲ್ಲಿದೆ. 57 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು 148 ವಿಕೆಟ್ ಕಬಳಿಸಿರುವ ಅಶ್ವಿನ್ WTC ವಿಕೆಟ್ ಸರದಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 313 ರನ್​ಗಳಿಗೆ ಆಲೌಟ್ ಆಗಿದೆ.

Leave a Reply

Your email address will not be published. Required fields are marked *