ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವೈಭವ್ ಸೂರ್ಯವಂಶಿ ಭೇಟಿಯಾದ ಪ್ರಧಾನಿ ಮೋದಿ

PM Modi meets Vaibhav Suryavanshi: "ಪಾಟ್ನಾ ವಿಮಾನ ನಿಲ್ದಾಣದಲ್ಲಿ, ಯುವ ಕ್ರಿಕೆಟ್‌ ಆಟಗಾರ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು" ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ವೈಭವ್ ಸೂರ್ಯವಂಶಿ ಭೇಟಿಯಾದ ಪ್ರಧಾನಿ ಮೋದಿ

Profile Abhilash BC May 30, 2025 3:20 PM

ನವದೆಹಲಿ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ಪರ ಸ್ಪೋಟಕ ಶತಕ ಮತ್ತು ಬ್ಯಾಟಿಂಗ್‌ ನಡೆಸಿ ಕ್ರಿಕೆಟ್ ಲೋಕವನ್ನು ಬೆರಗು ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ(Vaibhav Suryavanshi) ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು. ಈ ಭೇಟಿಯ ಫೋಟೊವನ್ನು ಮೋದಿ ತಮ್ಮ ಟ್ವಿಟರ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

"ಪಾಟ್ನಾ ವಿಮಾನ ನಿಲ್ದಾಣದಲ್ಲಿ, ಯುವ ಕ್ರಿಕೆಟ್‌ ಆಟಗಾರ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು" ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ಮೋದಿ ಭೇಟಿ ವೇಳೆ ವೈಭವ್ ಸೂರ್ಯವಂಶಿ ಅವರ ತಂದೆ ಮತ್ತು ತಾಯಿ ಕೂಡ ಜತೆಗಿದ್ದರು. ವೈಭವ್ ಅವರ ಕ್ರಿಕೆಟ್‌ ಸಾಧನೆ ಬಗ್ಗೆಯೂ ಮೋದಿ ಅವರ ತಂದೆ ಬಳಿ ಕೆಲ ಕಾಲ ಚರ್ಚಿಸಿದರು. ಇದೇ ವೇಳೆ ವೈಭವ್‌ ಮೋದಿ ಕಾಲಿಗೆ ಬಿದ್ದು ಆಶೀರ್ವಾದ ಕೂಡ ಪಡೆದರು.



ಇದನ್ನೂ ಓದಿ Vaibhav Suryavanshi: ಪೋರನಲ್ಲ, ದಾಖಲೆ ಶಿಖರವೇರಿದ ಪ್ರಖರ ಸೂರ್ಯ

ಗುಜರಾತ್‌ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ವಿಶ್ವ ಶ್ರೇಷ್ಠ ಬೌಲರ್‌ಗಳನ್ನು ದಂಡಿಸಿ ಕೇವಲ 35 ಎಸೆತಗಳಲ್ಲೇ ಶತಕ ಬಾರಿಸಿ ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ವಿಶ್ವದ ಅತಿ ಕಿರಿಯ ಆಟಗಾರ. ಜತೆಗೆ ಐಪಿಎಲ್‌ನಲ್ಲಿ 2ನೇ ಅತಿ ವೇಗದ ಸೆಂಚುರಿ ದಾಖಲೆ ನಿರ್ಮಿಸಿದ್ದರು. ಇವರ ಸಾಧನೆಗೆ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌, ವಿಂಡೀಸ್‌ನ ಬ್ರಿಯಾನ್‌ ಲಾರಾ ಸೇರಿ ಅನೇಕರು ಸಲಾಂ ಹೊಡೆದಿದ್ದರು. ಹಾಲಿ ಆವೃತ್ತಿಯಲ್ಲಿ ಅವರು 7 ಪಂದ್ಯಗಳನ್ನು ಆಡಿ 252 ರನ್‌ ಬಾರಿಸಿದ್ದರು.