ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿಶ್ವಕಪ್‌ ವಿಜೇತ ಶ್ರೀಲಂಕಾ ಕ್ರಿಕೆಟ್‌ ತಂಡದ ಸದಸ್ಯರ ಭೇಟಿಯಾದ ಮೋದಿ

ಶನಿವಾರ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ರಕ್ಷಣೆ, ಇಂಧನ, ಡಿಜಿಟಲ್‌ ಮೂಲಸೌಕರ್ಯ, ಆರೋಗ್ಯ ಮತ್ತು ವ್ಯಾಪಾರ ಕ್ಷೇತ್ರಗಳಿಗೆ ಸಂಬಂಧಿಸಿ ಮಹತ್ವದ 7 ಒಪ್ಪಂದಗಳಿಗೆ ಸಹಿ ಹಾಕಿದರು. ಇದೇ ಮೊದಲ ಬಾರಿಗೆ ಭಾರತ ಮತ್ತು ಶ್ರೀಲಂಕಾ ಐತಿಹಾಸಿಕ ರಕ್ಷಣ ಒಪ್ಪಂದವೊಂದಕ್ಕೆ ಸಹಿ ಹಾಕಿವೆ.

ವಿಶ್ವಕಪ್‌ ವಿಜೇತ ಶ್ರೀಲಂಕಾ ಕ್ರಿಕೆಟ್‌ ತಂಡದ ಸದಸ್ಯರ ಭೇಟಿಯಾದ ಮೋದಿ

Profile Abhilash BC Apr 6, 2025 7:54 AM

ಕೊಲಂಬೊ: 3 ದಿನಗಳ ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Modi)ಯವರು ಶನಿವಾರ 1996ರ ವಿಶ್ವಕಪ್‌ ವಿಜೇತ ಶ್ರೀಲಂಕಾ ಕ್ರಿಕೆಟ್‌(Sri Lanka's 1996 World Cup heroes) ತಂಡದ ಸದಸ್ಯರನ್ನು ಭೇಟಿ ಮಾಡಿದರು. 1996ರ ಮಾರ್ಚ್‌ನಲ್ಲಿ ಪಾಕಿಸ್ತಾನದ ಲಾಹೋರ್‌ನಲ್ಲಿ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಮಾರ್ಕ್‌ ಟೇಲರ್‌ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ಅರ್ಜುನ ರಣತುಂಗ ನೇತೃತ್ವದ ಶ್ರೀಲಂಕಾ ತಂಡ 7 ವಿಕೆಟ್‌ನಿಂದ ಸೋಲಿಸಿ ಟ್ರೋಫಿ ಗೆದ್ದಿತ್ತು.

ವಿಶ್ವಕಪ್‌ ವಿಜೇತ ತಂಡದಲ್ಲಿದ್ದ ಕುಮಾರ ಧರ್ಮಸೇನ, ಅರವಿಂದ ಡಿ ಸಿಲ್ವ, ಸನತ್‌ ಜಯಸೂರ್ಯ, ಚಾಮಿಂಡ ವಾಸ್‌, ಉಪುಲ್‌ ಚಂದನ, ರೊಮೇಶ್‌ ಕಲುವಿತರಣ ಮತ್ತು ಮರ್ವನ್‌ ಅತ್ತಪಟ್ಟು ಅವರು ಮೋದಿ ಅವರಿಗೆ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದರು. ಆಟಗಾರರ ಭೇಟಿಯ ಫೋಟೊವನ್ನು ಮೋದಿ ತಮ್ಮ ಟ್ವಿಟರ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.



ಶನಿವಾರ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ರಕ್ಷಣೆ, ಇಂಧನ, ಡಿಜಿಟಲ್‌ ಮೂಲಸೌಕರ್ಯ, ಆರೋಗ್ಯ ಮತ್ತು ವ್ಯಾಪಾರ ಕ್ಷೇತ್ರಗಳಿಗೆ ಸಂಬಂಧಿಸಿ ಮಹತ್ವದ 7 ಒಪ್ಪಂದಗಳಿಗೆ ಸಹಿ ಹಾಕಿದರು. ಇದೇ ಮೊದಲ ಬಾರಿಗೆ ಭಾರತ ಮತ್ತು ಶ್ರೀಲಂಕಾ ಐತಿಹಾಸಿಕ ರಕ್ಷಣ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನದ ಪ್ರಾಬಲ್ಯ ಹೆಚ್ಚುತ್ತಿರುವ ಹೊತ್ತಲ್ಲಿ ಈ ಒಪ್ಪಂದವು ಎರಡೂ ರಾಷ್ಟ್ರಗಳಿಗೆ ಮಹತ್ವದ್ದಾಗಿದೆ.

ಇದನ್ನೂ ಓದಿ IPL 2025 Points Table: ಡೆಲ್ಲಿಗೆ ಅಗ್ರಸ್ಥಾನ, ಏಳಕ್ಕೇರಿದ ರಾಜಸ್ಥಾನ್‌

ತಮಿಳುನಾಡಿನ ಮೀನುಗಾರರ ಸಮಸ್ಯೆ ಬಗ್ಗೆ ಮಾತುಕತೆ ವೇಳೆ ಪ್ರಸ್ತಾಪಿಸಿದ್ದು, ಲಂಕಾದಲ್ಲಿ ಬಂಧನದಲ್ಲಿರುವ ಭಾರತೀಯ ಮೀನುಗಾರರು ಮತ್ತು ಅವರ ದೋಣಿ ಬಿಡುಗಡೆಗೆ ಲಂಕಾ ಸರಕಾರ ಒಪ್ಪಿಕೊಂಡಿದೆ ಎಂದು ಮೋದಿ ತಿಳಿಸಿದ್ದಾರೆ.