BCCI Meeting: ಗಂಗೂಲಿಗೆ ಮತ್ತೆ ಬಿಸಿಸಿಐ ಅಧ್ಯಕ್ಷ ಸ್ಥಾನ; ಇಂದು ಅಮಿತ್ ಶಾ ನಿವಾಸದಲ್ಲಿ ಸಭೆ
2022ರಲ್ಲಿ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಸಭೆ ನಡೆಸಿ, ಆಗಿನ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿಯನ್ನು ಕೆಳಕ್ಕಿಳಿಸಿ ಆ ಸ್ಥಾನಕ್ಕೆ ರೋಜರ್‌ಬಿನ್ನಿ ಅವರನ್ನು ಆಯ್ಕೆ ಮಾಡಲಾಗಿತ್ತು. ಕೆಲ ಮೂಲಗಳ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ಅವರನ್ನು ಮತ್ತೆ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

-

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ವಾರ್ಷಿಕ ಸಾಮಾನ್ಯ ಸಭೆ(BCCI Meeting) ಸೆ.28ರಂದು ನಡೆಯಲಿದ್ದು, ಈ ಸಭೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಇದಕ್ಕೂ ಮುನ್ನ ಶನಿವಾರ ಗೃಹ ಸಚಿವ ಅಮಿತ್ ಶಾ(Home Minister Amit Shah) ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಆರಿಸಿ, ಚುನಾವಣೆ ಇಲ್ಲದೆ ಅವಿರೋಧವಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ, ಕಿರಣ್ ಮೋರೆ, ಹರ್ಭ ಜನ್ ಸಿಂಗ್, ಕರ್ನಾಟಕದ ರಘುರಾಮ್ ಭಟ್ ಹೆಸರು ಕೇಳಿಬರುತ್ತಿವೆ. ಕರ್ನಾಟಕದ ದಿಗ್ಗಜ ಕ್ರಿಕೆಟಿಗ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಇದೀಗ ಹೊಸ ಅಧ್ಯಕ್ಷರ ಹುಡುಕಾಟದಲ್ಲಿದೆ ಬಿಸಿಸಿಐ.
2022ರಲ್ಲಿ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಸಭೆ ನಡೆಸಿ, ಆಗಿನ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿಯನ್ನು ಕೆಳಕ್ಕಿಳಿಸಿ ಆ ಸ್ಥಾನಕ್ಕೆ ರೋಜರ್‌ಬಿನ್ನಿ ಅವರನ್ನು ಆಯ್ಕೆ ಮಾಡಲಾಗಿತ್ತು. ಕೆಲ ಮೂಲಗಳ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ಅವರನ್ನು ಮತ್ತೆ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸಭೆಯಯಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮಾತ್ರವಲ್ಲದೆ ಸಿಎಸಿ ಒಟ್ಟು ಏಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಅಜಿತ್ ಅಗರ್ಕರ್ ನೇತೃತ್ವದ ಪುರುಷರ ರಾಷ್ಟ್ರೀಯ ಆಯ್ಕೆ ಸಮಿತಿಗೆ ಇಬ್ಬರು ಸದಸ್ಯರು, ರಾಷ್ಟ್ರೀಯ ಜೂನಿಯರ್ ಸಮಿತಿಗೆ ಒಬ್ಬರು ಮತ್ತು ರಾಷ್ಟ್ರೀಯ ಮಹಿಳಾ ಸಮಿತಿಗೆ ನಾಲ್ವರು. ಸೆಪ್ಟೆಂಬರ್ 28 ರ ವಾರ್ಷಿಕ ಮಹಾಸಭೆಯ ನಂತರ ಹೊಸ ಆಯ್ಕೆದಾರರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ Apollo Tyres: ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಸ್ಪಾನ್ಸರ್ ಘೋಷಿಸಿದ ಬಿಸಿಸಿಐ!