ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್ 3 ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಪ್ರಮೋದ್ ಭಗತ್ ಅವರನ್ನು 18 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ.
ಹೀಗಾಗಿ ಪ್ರಮೋದ್ಗೆ ಈ ಬಾರಿಯ ಪ್ಯಾರಾಲಿಂಪಿಕ್ಸ್ ಕೈತಪ್ಪಿದೆ. ಡೋಪಿಂಗ್ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಮಾರ್ಚ್ 1, 2024 ರಂದು, ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (CAS) ಡೋಪಿಂಗ್ ವಿರೋಧಿ ವಿಭಾಗವು ಬಿಡಬ್ಲ್ಯುಎಫ್ ಡೋಪಿಂಗ್ ವಿರೋಧಿ ನಿಯಮಗಳ ಉಲ್ಲಂಘನೆಯಲ್ಲಿ ಭಗತ್, 12 ತಿಂಗಳೊಳಗೆ ಮೂರು ಬಾರಿ ವಿಫಲರಾಗಿದ್ದಾರೆ ಎಂದು ಬಿಡಬ್ಲ್ಯುಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
‘ಭಗತ್ ತಮ್ಮ ಅಮಾನತಿನ ನಿರ್ಧಾರವನ್ನು ಪ್ರಶ್ನಿಸಿ ಜುಲೈ 29 ರಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈ ಮನವಿಯನ್ನು ಸಿಎಎಸ್ ವಜಾಗೊಳಿಸಿದೆ.
ಐದನೇ ವಯಸ್ಸಿನಲ್ಲಿ ಎಡಗಾಲಿನ ಅಂಗವೈಕಲ್ಯಕ್ಕೆ ತುತ್ತಾಗಿ ಪೋಲಿಯೊಗೆ ಒಳಗಾದ ಭಗತ್ ಅವರು ಎರಡು ಬಾರಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಾಗಿದ್ದಾರೆ ಮತ್ತು ಅವರ ವಿಭಾಗದಲ್ಲಿ ಪ್ರಸ್ತುತ ವಿಶ್ವ ನಂ 3 ಆಗಿದ್ದಾರೆ.