ಬೆಂಗಳೂರು: ವಡೋದರದಲ್ಲಿ ಜನವರಿ 9ರಿಂದ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಟೂರ್ನಿಯ ನಾಕೌಟ್ ಪಂದ್ಯಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ತಂಡವನ್ನು ಪ್ರಕಟಿಸಿದೆ. 16 ಆಟಗಾರರ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನಾಡಿದ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ ಹಾಗೂ ವೇಗಿ ಪ್ರಸಿದ್ಧ ಕೃಷ್ಣ ತಂಡಕ್ಕೆ ಮರಳಿದ್ದಾರೆ. ಇದು ತಂಡಕ್ಕೆ ಹೆಚ್ಚಿನ ಬಲ ನೀಡಿದೆ.
ಲೀಗ್ ಹಂತದ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ತುತ್ತಾಗಿರುವ ವೇಗಿ ವೈಶಾಕ್ ವಿಜಯ್ ಕುಮಾರ್ ಜತೆಗೆ ಕಿಶನ್ ಎಸ್. ಬಿದರೆ ಮತ್ತು ಆಲ್ರೌಂಡರ್ ಮನೋಜ್ ಭಾಂಡಗೆ ಅವರನ್ನು ನಾಕೌಟ್ ಪಂದ್ಯಗಳಿಂದ ಕೈ ಬಿಡಲಾಗಿದೆ. ಇವರ ಸ್ಥಾನದಲ್ಲಿ ಯುವ ಆಲ್ರೌಂಡರ್ ಯಶೋವರ್ಧನ್ ಪರಂತಪ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
‘ಸಿ’ ಗುಂಪಿನಲ್ಲಿ ಆಡಿರುವ ಮಯಾಂಕ್ ಅಗರ್ವಾಲ್ ಸಾರಥ್ಯದ ಕರ್ನಾಟಕ ಆಡಿದ 7 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 24 ಅಂಕ ಸಂಪಾದಿಸಿ ಅಗ್ರಸ್ಥಾನಿಯಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿತ್ತು. 2ನೇ ಸ್ಥಾನಿಯಾದ ಪಂಜಾಬ್(24 ಅಂಕ) ಪ್ರಿ ಕ್ವಾರ್ಟರ್ ತಲುಪಿತ್ತು.
ನಾಕೌಟ್ ಪಂದ್ಯಗಳ ವೇಳಾಪಟ್ಟಿ
ಪ್ರಿ ಕ್ವಾರ್ಟರ್‌ಫೈನಲ್ಸ್ – ಜನವರಿ 9
ಹರಿಯಾಣ-ಬಂಗಾಳ
ರಾಜಸ್ಥಾನ-ತಮಿಳುನಾಡು
ಕ್ವಾರ್ಟರ್‌ಫೈನಲ್ಸ್-ಜನವರಿ11
ಕರ್ನಾಟಕ-ಬರೋಡ
ಮಹಾರಾಷ್ಟ್ರ -ಪಂಜಾಬ್
ನೇರಪ್ರಸಾರ: ಜಿಯೋ ಸಿನಿಮಾ
ಕರ್ನಾಟಕ ತಂಡ
ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಅನೀಶ್ ಕೆವಿ, ಸ್ಮರಣ್ ಆರ್., ಶ್ರೀಜಿತ್ ಕೆಎಲ್ (ವಿ.ಕೀ), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ ಕೃಷ್ಣ, ಕೌಶಿಕ್ ವಿ., ವಿದ್ಯಾಧರ್ ಪಾಟೀಲ್, ಅಭಿಲಾಷ್ ಶೆಟ್ಟಿ, ಪ್ರವೀಣ್ ದುಬೆ, ಲವನೀತ್ ಸಿಸೋಡಿಯಾ (ವಿ.ಕೀ) ಹಾಗೂ ಯಶೋವರ್ಧನ್ ಪರಂತಪ್.