ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತ ತಂಡಕ್ಕೆ ಮರಳಿದ ಪ್ರತಿಕಾ ರಾವಲ್; ಆಸೀಸ್‌ ಏಕದಿನ ಸರಣಿಯಲ್ಲಿ ಅವಕಾಶ

Pratika Rawal: ಇದೇ ವರ್ಷದ ಆರಂಭದಲ್ಲಿ ನಡೆದಿದ್ದ 2026ರ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಪ್ರತಿಕಾ ರಾವಲ್‌ ಅವರನ್ನು ಯುಪಿ ವಾರಿಯರ್ಜ್ ತಂಡ ಹರಾಜಿನಲ್ಲಿ ಆಯ್ಕೆ ಮಾಡಿತ್ತು. ಆದರೆ ಅವರು ಸಂಪೂರ್ಣ ಚೇತರಿಕೆ ಕಾಣದ ಕಾರಣ ಸ್ಪರ್ಧೆಯಲ್ಲಿ ಭಾಗವಹಿಸಲಿಲ್ಲ.

ಭಾರತ ತಂಡಕ್ಕೆ ಮರಳಿದ ಪ್ರತಿಕಾ ರಾವಲ್

Pratika Rawal back in India squad -

Abhilash BC
Abhilash BC Feb 17, 2026 12:22 PM

ಮುಂಬಯಿ, ಫೆ.17: 2025ರ ಮಹಿಳಾ ವಿಶ್ವಕಪ್ ಸಮಯದಲ್ಲಿ ಗಾಯಗೊಂಡು ಸುದೀರ್ಘ ವಿಶ್ರಾಂತಿ ಪಡೆದಿದ್ದ ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್‌ ಪ್ರತೀಕಾ ರಾವಲ್ ಮತ್ತೆ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ಸರಣಿಯ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

"ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಪಂದ್ಯಾವಳಿ ಸಮಯದಲ್ಲಿ ಉಂಟಾದ ಪಾದದ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರಾವಲ್ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (COE) ನಲ್ಲಿ ತಮ್ಮ ಪುನರ್ವಸತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ" ಎಂದು ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಶ್ವಕಪ್‌ನ ಬಾಂಗ್ಲಾದೇಶ ವಿರುದ್ಧ ಮಳೆಯಿಂದ ಅಡಚಣೆಯಾಗಿದ್ದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾವಲ್‌ ಗಾಯಗೊಂಡು ಟೂರ್ನಿಯಿಂ ಹೊರಬಿದ್ದಿದ್ದರು. ಸೆಮಿಫೈನಲ್‌ಗೆ ಮುನ್ನ ಅವರ ಬದಲಿಗೆ ಶಫಾಲಿ ವರ್ಮಾ ತಂಡಕ್ಕೆ ಆಯ್ಕೆಯಾದರು. ರಾವಲ್ ದೀರ್ಘ ಚೇತರಿಕೆ ಕಂಡ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಆರಂಭದಲ್ಲಿ ಅವರನ್ನು ಆಸ್ಟ್ರೇಲಿಯಾದ ಏಕೈಕ ಟೆಸ್ಟ್ ಪಂದ್ಯಕ್ಕೆ ಮಾತ್ರ ತಂಡದಲ್ಲಿ ಹೆಸರಿಸಲಾಗಿತ್ತು. ಇದೀಗ ಏಕದಿನ ಸರಣಿಗೂ ಸೇರಿಸಿಕೊಳ್ಳಲಾಗಿದೆ.

ವಿಶ್ವಕಪ್‌ ಗೆದ್ದ ಸ್ನೇಹ್‌ ರಾಣಾ, ಪ್ರತಿಕಾ, ರೇಣುಕಾಗೆ ರೈಲ್ವೆನಲ್ಲಿ ಬಡ್ತಿ

ಇದೇ ವರ್ಷದ ಆರಂಭದಲ್ಲಿ ನಡೆದಿದ್ದ 2026ರ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಅವರನ್ನು ಯುಪಿ ವಾರಿಯರ್ಜ್ ತಂಡ ಹರಾಜಿನಲ್ಲಿ ಆಯ್ಕೆ ಮಾಡಿತ್ತು. ಆದರೆ ಅವರು ಸಂಪೂರ್ಣ ಚೇತರಿಕೆ ಕಾಣದ ಕಾರಣ ಸ್ಪರ್ಧೆಯಲ್ಲಿ ಭಾಗವಹಿಸಲಿಲ್ಲ.

ಏಕದಿನ ಸರಣಿಗೆ ಪರಿಷೃತ ಭಾರತ ತಂಡ

ಹರ್ಮನ್‌ಪ್ರೀತ್ ಕೌರ್ (ನಾಯಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿ.ಕೀ.), ಉಮಾ ಚೆಟ್ರಿ (ವಿ.ಕೀ.), ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಪ್ರತೀಕಾ ರಾವಲ್.